ಸಾರಾಂಶ
ಪ್ರಸ್ತುತ ದಿನಗಳಲ್ಲಿ ಹಲವು ಕ್ರೀಡೆಗಳು ನಶಿಸುತ್ತಿವೆ. ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವೇಳೆ ಕ್ರೀಡೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಶಿಕ್ಷಣಕ್ಕೆ ಸಮಾನವಾಗಿ ಕ್ರೀಡೆಯಲ್ಲಿ ಭಾಗವಹಿಸಬೇಕು. ಇದರಿಂದ ದೈಹಿಕ ವ್ಯಾಯಾಮ ಜೊತೆಗೆ ಕ್ರೀಡೆಗಳನ್ನ ಉಳಿಸಿ ಬೆಳಸಿದಂತಾಗುತ್ತದೆ.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಶ್ರೀರಂಗನಾಥಸ್ವಾಮಿ ಮೈದಾನದಲ್ಲಿ 3 ದಿನಗಳು ನಡೆಯುವ ಕನ್ನಡ ರಾಜ್ಯೋತ್ಸವ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಚಾಲನೆ ನೀಡಿದರು.ಕರ್ನಾಟಕ ರಕ್ಷಣಾ ವೇದಿಕೆಯಿಂದ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ ಶಾಸಕರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಹಲವು ಕ್ರೀಡೆಗಳು ನಶಿಸುತ್ತಿವೆ. ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವೇಳೆ ಕ್ರೀಡೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಶಿಕ್ಷಣಕ್ಕೆ ಸಮಾನವಾಗಿ ಕ್ರೀಡೆಯಲ್ಲಿ ಭಾಗವಹಿಸಬೇಕು. ಇದರಿಂದ ದೈಹಿಕ ವ್ಯಾಯಾಮ ಜೊತೆಗೆ ಕ್ರೀಡೆಗಳನ್ನ ಉಳಿಸಿ ಬೆಳಸಿದಂತಾಗುತ್ತದೆ ಎಂದರು.
ಕ್ರೀಡಾಪಟುಗಳು ಪಂದ್ಯಾವಳಿಗಳಲ್ಲಿ ಗೆಲ್ಲಲೇಬೇಕು ಎಂಬ ಉದ್ದೇಶ ಇಟ್ಟುಕೊಂಡ ಭಾಗವಹಿಸಬಾರದು. ಸ್ನೇಹಪೂರ್ವಕವಾಗಿ ಸ್ಪರ್ಧಿಸಿ ಪರಸ್ಪರ ಸ್ನೇಹ ಹಾಗೂ ವಿಶ್ವಾಸ ವೃದ್ಧಿಯಾಗುತ್ತಿದೆ ಎಂದ ಅವರು, ಸಂಘ ಸಂಸ್ಥೆಗಳು, ಕನ್ನಡಪರ ಸಂಘಟನೆಗಳು ನಡೆಸುವ ಕ್ರೀಡಾ ಕೂಟದಲ್ಲಿ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಬೇಕು ಪಂದ್ಯಾವಳಿಗೆ ಸಾರ್ವಜನಿಕರು ಹೆಚ್ಚಿನ ಪ್ರಾತ್ಸಾಹ ನೀಡಬೇಕು ಎಂದರು.ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ತಂಡಗಳು ಆಗಮಿಸಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಶಂಕರ್ ಚಂದಗಾಲ್ ಅಧ್ಯಕ್ಷತೆ ವಹಿಸಿ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಜಯರಾಂ, ಕಸಾಪ ಅಧ್ಯಕ್ಷ ಸಿದ್ದಲಿಂಗು, ಸಮಾಜ ಸೇವಕಿ ಸರಸ್ವತಿ, ಗೌಡಹಳ್ಳಿ ದೇವರಾಜು, ರಾಂಪುರ ವಿಜೇಂದ್ರ, ದರಸಗುಪ್ಪೆ ಗ್ರಾಪಂ ಅಧ್ಯಕ್ಷ ಮುರುಳಿ, ಕ್ರಿಕೆಟಿಗ ವಿಜಯಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.ಇಂದು ಕೆ-ಸೆಟ್ ಪರೀಕ್ಷೆ: 35 ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
ಮೈಸೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನ.24 ರಂದು ಮೈಸೂರು ನಗರದ 35 ಪರೀಕ್ಷಾ ಕೇಂದ್ರಗಳಲ್ಲಿ 2024ನೇ ಸಾಲಿನ ಕೆ-ಸೆಟ್ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಲೂ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 163 ರೀತ್ಯಾ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಜಾರಿಗೊಳಿಸಿದ್ದಾರೆ. ಈ ಪ್ರದೇಶಗಳಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿ ಹೊರತುಪಡಿಸಿ ಇತರೆ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು, ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್, ಬ್ರೌಸಿಂಗ್ ಸೆಂಟರ್ ಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಅವರು ಸೂಚಿಸಿದ್ದಾರೆ.