ಕನ್ನಡ ರಾಜ್ಯೋತ್ಸವದ ಜಿಲ್ಲಾ ಮಟ್ಟದ ಕವಿಗೋಷ್ಠಿ

| Published : Nov 06 2024, 12:33 AM IST

ಸಾರಾಂಶ

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಿತು. ಕವಿಗೋಷ್ಠಿಯಲ್ಲಿ 26 ಕವಿಗಳು ಭಾಗವಹಿಸಿದ್ದರು.

ಮಡಿಕೇರಿ : ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ, ಕೊಡಗು ಜಿಲ್ಲಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ, ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಿತು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ ಪಿ.ಕೆ. ಅವರು ಉದ್ಘಾಟಿಸಿದರು. ಹಿರಿಯ ಕವಿಗಳಾದ ಮೂಕಳೇರ ಟೈನಿ ಪೂನಚ್ಚ ಅವರು ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಕಾನಡ್ಕ ಡೀನ ದೇವಯ್ಯ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಯಶಿಕ ದೇವಯ್ಯ ಕಾನಡ್ಕ ಅವರು ಪ್ರಾರ್ಥನಾ ನೃತ್ಯ ಮಾಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ. ಎ ವಿದ್ಯಾರ್ಥಿನಿಯಾರಾದ ವೃಂದ ನಿರೂಪಣೆ ಮಾಡಿದರೆ. ವಿದ್ಯಾರ್ಥಿನಿ ಶ್ವೇತಾ ಅತಿಥಿಗಳನ್ನು ಸ್ವಾಗತಿಸಿದರು.

ಕವಿಗೋಷ್ಠಿಯಲ್ಲಿ 26 ಕವಿಗಳು ಭಾಗವಹಿಸಿದ್ದು, ಕನ್ನಡ ನಾಡು-ನುಡಿ ಸಂಸ್ಕೃತಿಯ ಬಗ್ಗೆ ಕವನಗಳನ್ನು ವಾಚಿಸಿದರು. ಕವಿಗೋಷ್ಠಿಯಲ್ಲಿ ಕವಿಗಳಿಗೆ ಗೌರವಪೂರ್ವಕವಾಗಿ ಕನ್ನಡ ರಾಜ್ಯೋತ್ಸವದ ಶಾಲನ್ನು ಹಾಕಿ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ಹಾಗೂ ಪುಸ್ತಕವನ್ನು ಕೊಟ್ಟು ಗೌರವಿಸಲಾಯಿತು.