ಸಾರಾಂಶ
ಮದ್ದೂರು ಪಟ್ಟಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವದ ಆಚರಣೆ ವೇಳೆ ಬಿಸಿಲಿನ ಝಳದಿಂದ ಇಬ್ಬರು ಖಾಸಗಿ ಶಾಲೆ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ಜರುಗಿತು.
ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವದ ಆಚರಣೆ ವೇಳೆ ಬಿಸಿಲಿನ ಝಳದಿಂದ ಇಬ್ಬರು ಖಾಸಗಿ ಶಾಲೆ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ಜರುಗಿತು.ಪಟ್ಟಣದ ಲೀಲಾವತಿ ಬಡಾವಣೆಯ ಶಾಂತ ಮರಿಯಪ್ಪ ಕಾನ್ವೆಂಟ್‌ನ ಭುವನೇಶ್ವರಿ ಹಾಗೂ ಕೆಂಗಲ್ ಹನುಮಂತಯ್ಯ ನಗರದ ಬಡಾವಣೆಯ ಸೆಂಟ್ ಆನ್ಸ್ ಶಾಲೆ 8 ನೇತರಗತಿ ವಿದ್ಯಾರ್ಥಿನಿ ಎಸ್.ಎ.ವರ್ಷ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರು.
ಈ ವೇಳೆ ಸ್ಥಳದಲ್ಲಿ ಆಂಬ್ಯುಲೆನ್ಸ್ ನಲ್ಲಿದ್ದ ವೈದ್ಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಸೂಕ್ತ ಚಿಕಿತ್ಸೆ ನೀಡಿ ದ ಕೆಲ ಕಾಲದ ನಂತರ ವಿದ್ಯಾರ್ಥಿನಿಯರು ಚೇತರಿಸಿಕೊಂಡರು. ರಾಜ್ಯೋತ್ಸವದ ಪಥ ಸಂಚಲನದಲ್ಲಿ ಪಾಲ್ಗೊಳ್ಳಲು ಭುವನೇಶ್ವರಿ ಆಗಮಿಸಿದ್ದರೆ ಎಸ್.ಎ.ವರ್ಷ ಬ್ಯಾಂಡ್ ಸೆಟ್ ತಂಡದಲ್ಲಿ ಪಾಲ್ಗೊಂಡಿದ್ದರು.ಶಾಸಕರು ಭಾಷಣ ಮಾಡುತ್ತಿದ್ದ ವೇಳೆ ಬಿಸಿಲಿನ ಝಳದಿಂದ ವಿದ್ಯಾರ್ಥಿನಿಯರು ತಲೆ ಸುತ್ತಿ ಅಸ್ವಸ್ಥಗೊಂಡರು. ಬಳಿಕ ಆಂಬ್ಯುಲೆನ್ಸ್ ನಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯರ ರಕ್ತದೊತ್ತಡ ಮತ್ತು ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ ಬಳಿಕ ವಿಶ್ರಾಂತಿ ಪಡೆದು ಚೇತರಿಸಿಕೊಂಡರು.
ಹೆಜ್ಜೇನು ದಾಳಿಗೆ ರೈತ ಸಾವುಹಲಗೂರು:
ಹೆಜ್ಜೇನು ದಾಳಿಯಿಂದ ರೈತ ಬಲಿಯಾಗಿರುವ ಘಟನೆ ದೊಡ್ಡ ಚೆನ್ನಿಪುರ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಲೇ.ಗಿರೀಗೌಡರ ಪುತ್ರ ನಂದೀಶ (35) ತಮ್ಮ ಜಮೀನಿನಲ್ಲಿ ಶುಕ್ರವಾರ ಬೆಳಗ್ಗೆ ಬೇಳೆಗೆ ಔಷಧಿ ಸಿಂಪಡಿಸುತ್ತಿದ್ದಾಗ ಏಕಾಏಕಿ ಹೆಜ್ಜೇನು ದಾಳಿ ಮಾಡಿವೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಈತನನ್ನು ಪಕ್ಕದ ಜಮೀನಿನವರು ತಕ್ಷಣ ಮಳವಳ್ಳಿ ಆಸ್ಪತ್ರೆಗೆ ಕರೆದೊಯ್ಯವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.