ಸಾರಾಂಶ
ತೊಟ್ಟಿಲು ನಗರಿ'' ಕಲಘಟಗಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಲಘಟಗಿ:
''''ತೊಟ್ಟಿಲು ನಗರಿ'''' ಕಲಘಟಗಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಪಟ್ಟಣದ ಆಂಜನೇಯ ವೃತ್ತದಲ್ಲಿ ಕರ್ನಾಟಕ ಸಂಗ್ರಾಮ ಸೇನೆ ವತಿಯಿಂದ ಕನ್ನಡ ಧ್ವಜಾರೋಹಣದ ಮೂಲಕ ಪಟ್ಟಣದಲ್ಲಿ 101 ಮೀಟರ್ ಉದ್ದದ ಕನ್ನಡ ಬಾವುಟದ ಮೆರವಣಿಗೆ ಮಾಡಲಾಯಿತು.
ಈ ವೇಳೆ ಸೇನೆಯ ತಾಲೂಕು ಅಧ್ಯಕ್ಷ ಸಾತಪ್ಪ ಕುಂಕೂರ ಮಾತನಾಡಿ, ಕನ್ನಡ ಭಾಷೆಯ ಉಳಿವಿಗೆ ಇಂತಹ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ಒಟ್ಟುಗೂಡಿ ಆಚರಿಸುವುದು ಅವಶ್ಯವಾಗಿದೆ ಎಂದರು.ಪಟ್ಟಣದ ಶಾಸಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಆಡಳಿತ ಕಚೇರಿ ಹಾಗೂ ಕನ್ನಡ ಪರ ಸಂಘಟನೆಗಳ ವತಿಯಿಂದ ತಾಲೂಕಿನ ವಿವಿಧ ಗಣ್ಯರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಕರವೇ ತಾಲೂಕು ಅಧ್ಯಕ್ಷ ಸಚಿನ್ ಪವಾರ ಮಾತನಾಡಿ, ಅಂಗಡಿಗಳಿಗೆ ಕನ್ನಡದ ನಾಮಫಲಕಗಳು ಕಡ್ಡಾಯವಾಗಿ ಇರಬೇಕು. ಕನ್ನಡ ಭಾಷೆಯನ್ನು ಪ್ರೋತ್ಸಾಹಿಸಲು ಕನ್ನಡ ಭಾಷೆಯನ್ನು ಹೆಚ್ಚು ಬಳಸಬೇಕು ಎಂದರು.
ತಹಸೀಲ್ದಾರ್ ಬಸವರಾಜ ಹೊಂಕನವರ ಮಾತನಾಡಿ, ಕನ್ನಡ ಭಾಷೆಗೆ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ದೊರಕಿವೆ. ಪ್ರತಿಯೊಬ್ಬರೂ ಕನ್ನಡ ಭಾಷೆ ಉಳಿವೆಗೆ ಶ್ರಮಿಸುವಂತೆ ಕರೆ ನೀಡಿದರು.ವಿದ್ಯಾರ್ಥಿಗಳು ಕನ್ನಡ ಭಾಷೆಯ ಹಿರಿಮೆ ಬಿಂಬಿಸುವ ಹಾಡುಗಳಿಗೆ ನೃತ್ಯ ಮಾಡಿದರು ಹಾಗೂ ಪುಟಾಣಿ ಮಕ್ಕಳು ರಾಣಿ ಚೆನ್ನಮ್ಮನಂತಹ ಮಹನೀಯರ ವೇಷ ಧರಿಸಿ ಕಾರ್ಯಕ್ರಮಕ್ಕೆ ರಂಗು ತಂದರು.
ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ರಮೇಶ ಸೋಲಾರಗೊಪ್ಪ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಮುರಳ್ಳಿ, ಪಪಂ ಅಧ್ಯಕ್ಷೆ ಶಿಲ್ಪಾ ಪಾಲ್ಕರ್, ಪಪಂ ಸದಸ್ಯರು, ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ಪಟ್ಟಣದ ಯುವಶಕ್ತಿ ಸರ್ಕಲ್‌ನಲ್ಲಿ ಕರುನಾಡು ಕಾರ್ಮಿಕರ ವೇದಿಕೆ ವತಿಯಿಂದ ರಾಜ್ಯೋತ್ಸವ ಆಚರಿಸಲಾಯಿತು. ಈ ವೇಳೆ ಕೂಲಿ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಬ್ಯಾಗ್ ವಿತರಿಸಲಾಯಿತು. ತಾಲೂಕು ಅಧ್ಯಕ್ಷ ಮಂಜುನಾಥ ಬೋವಿ, ನಗರ ಘಟಕದ ಅಧ್ಯಕ್ಷ ಶಿವರಾಜ್ ಡೆಂಬೆ ಹಾಗೂ ಕಾರ್ಯಕರ್ತರು ಹಾಜರಿದ್ದರು.
;Resize=(128,128))
;Resize=(128,128))