ಡಿ.14ರಂದು ಸಂಜೆ ಪಟ್ಟಣದ ಪುರಸಭಾ ಮೈದಾನದಲ್ಲಿ ತಾಲೂಕಿನಲ್ಲಿ ಜನಿಸಿ ದೇಶ ಸೇವೆ ಸಲ್ಲಿಸುತ್ತಿರುವ ಯೋಧರಿಗೆ, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ, ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕು ಜಯ ಕರ್ನಾಟಕ ಸಂಘಟನೆಯಿಂದ ಡಿ.14ರಂದು 70ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಹಲವು ಸಾಂಸ್ಕೃತಿಕ ಹಾಗೂ ವೀರಯೋಧರಿಗೆ, ಸಾಧಕರಿಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುವುದು ಎಂದು ಸಂಘಟನೆ ತಾಲೂಕು ಅಧ್ಯಕ್ಷ ಹೊನ್ನೇನಹಳ್ಳಿ ಸೋಮಶೇಖರ್ ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಡಿ.14ರಂದು ಸಂಜೆ ಪಟ್ಟಣದ ಪುರಸಭಾ ಮೈದಾನದಲ್ಲಿ ತಾಲೂಕಿನಲ್ಲಿ ಜನಿಸಿ ದೇಶ ಸೇವೆ ಸಲ್ಲಿಸುತ್ತಿರುವ ಯೋಧರಿಗೆ, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ, ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದರು.
ಕಾರ್ಯಕ್ರಮವನ್ನು ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಡಾ.ಬಿ.ಎನ್.ಜಗದೀಶ್ ವಹಿಸಲಿದ್ದಾರೆ. ಧ್ವಜಾರೋಹಣವನ್ನು ಶಾಸಕ ಎಚ್.ಟಿ ಮಂಜು ವಹಿಸಲಿದ್ದಾರೆ. ಭುವನೇಶ್ವರಿ ಭಾವಚಿತ್ರ ಅನಾವರಣವನ್ನು ಮಾಜಿ ಶಾಸಕ ಕೆ. ಬಿ ಚಂದ್ರಶೇಖರ್, ಪುಷ್ಪಾರ್ಚನೆಯನ್ನು ಜಿಲ್ಲಾಧ್ಯಕ್ಷ ಯೋಗಣ್ಣ ಸಲ್ಲಿಸಲಿದ್ದಾರೆ ಎಂದರು.ಅತಿಥಿಗಳಾಗಿ ನಟರಾದ ಶ್ರೀಮುರಳಿ, ವಸಿಷ್ಠಸಿಂಹ, ಹಾಸ್ಯ ಕಲಾವಿದ ಟೆನಿಸ್ ಕೃಷ್ಣ, ಚಂದ್ರಪ್ರಭ, ಶೀಳನೆರೆ ಕೇಶವ, ಪ್ರಶಾಂತ್ ಚಕ್ರವರ್ತಿ, ತ್ರಿವಿಕ್ರಮ್ ಸೇರಿದಂತೆ ಅನೇಕ ನಟ ನಟಿಯರು ಹಾಸ್ಯ ಕಲಾವಿದರು, ವಿವಿಧ ಪಕ್ಷಗಳ ರಾಜಕೀಯ ಮುಖಂಡರು, ಸಂಘಗಳ ಪದಾಧಿಕಾರಿಗಳು ಭಾಗವಹಿಸುವರು ಎಂದರು.
ಸುದ್ದಿಗೋಷ್ಠಿಯಲ್ಲಿ ತಾಲೂಕು ಯೂತ್ ಅಧ್ಯಕ್ಷ ಕೆ.ಎಲ್.ಮಹೇಶ್, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಜಯಲಕ್ಷ್ಮಮ್ಮ, ಕಾರ್ಯಾಧ್ಯಕ್ಷ ಅನುವಿನಕಟ್ಟೆ ಆನಂದ್, ನಗರ ಮಹಿಳಾ ಅಧ್ಯಕ್ಷೆ ಅನು, ತಾಲೂಕು ಉಪಾಧ್ಯಕ್ಷರಾದ ಮನು, ಅಗ್ರಹಾರ ಯೋಗೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಭುನಾಯಕ, ಸಂಘಟನೆ ಕಾರ್ಯದರ್ಶಿ ಭಾವಜಿ ಚಂದ್ರು ಇದ್ದರು.ಕೆ.ಅಭಿಲಾಷ್‌ಗೆ ಪಿಎಚ್.ಡಿ ಪದವಿ
ಕನ್ನಡಪ್ರಭ ವಾರ್ತೆ ಮಂಡ್ಯಪ್ರಸ್ತುತ ಮಂಡ್ಯದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಅಭಿಲಾಷ್ ಅವರು "Goods and Services Tax Implications on Selected FMCG Products: A Perceptual Study in Karnataka " ವಿಷಯದಲ್ಲಿ ಅವರು ಮಹಾರಾಜ ಕಾಲೇಜಿನ ಪ್ರೊ.ಆರ್.ತಿಮ್ಮರಾಯಪ್ಪರ ಮಾರ್ಗದರ್ಶನದಲ್ಲಿ ಸಂಶೋಧನೆ ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಈ ವಿಷಯದಡಿ ಪಿಎಚ್.ಡಿ ಪದವಿ ಪಡೆದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.