ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕರ ಕೊಡುಗೆ ಅನನ್ಯ

| Published : Nov 09 2025, 01:30 AM IST

ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕರ ಕೊಡುಗೆ ಅನನ್ಯ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆಯ ಕುರುಬ ಸಮಾಜದ ವತಿಯಿಂದ ದಾಸವರೇಣ್ಯ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಬಸ್ ನಿಲ್ದಾಣದಲ್ಲಿ ಪುಷ್ಪಾಲಂಕೃತ ವೇದಿಕೆಯಲ್ಲಿ ಕನಕದಾಸರ ಭಾವಚಿತ್ರವಿಟ್ಟು ಪೂಜಿಸಲಾಯಿತು. ಬಳಿಕ ಅನ್ನ ಸಂತರ್ಪಣೆ ನಡೆಯಿತು.

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆಯ ಕುರುಬ ಸಮಾಜದ ವತಿಯಿಂದ ದಾಸವರೇಣ್ಯ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಬಸ್ ನಿಲ್ದಾಣದಲ್ಲಿ ಪುಷ್ಪಾಲಂಕೃತ ವೇದಿಕೆಯಲ್ಲಿ ಕನಕದಾಸರ ಭಾವಚಿತ್ರವಿಟ್ಟು ಪೂಜಿಸಲಾಯಿತು. ಬಳಿಕ ಅನ್ನ ಸಂತರ್ಪಣೆ ನಡೆಯಿತು.

ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ ಮಾತನಾಡಿ, ಕನಕದಾಸರ ಹುಟ್ಟು, ಬಾಲ್ಯದ ಜೀವನ ಅವರ ಸಾಧನೆಗಳನ್ನು ತಿಳಿಸಿಕೊಟ್ಟರು. ಕನಕದಾಸರು ಕೀರ್ತನಕಾರರಾಗಿ, ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ನೀಡಿದ ಕೊಡುಗೆ ಅನನ್ಯವಾಗಿದೆ. ಉಡುಪಿ ಶ್ರೀ ಕೃಷ್ಣನ ಪರಮ ಭಕ್ತರಾದ ಕನಕದಾಸರು, ತಮ್ಮ ಭಕ್ತಿಯಿಂದ ಶ್ರೀ ಕೃಷ್ಣನನ್ನು ಒಲಿಸಿಕೊಂಡಿದ್ದು ಇತಿಹಾಸ. ದಾಸರ ಬದುಕಿನ ಹೆಜ್ಜೆ ಗುರುತುಗಳೇ ನಮಗೆ ಮಾರ್ಗದರ್ಶನವಾಗಿದ್ದು, ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿದೀಪ ಎಂದರು.

ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, ಕನಕದಾಸರು ಕರ್ನಾಟಕದಲ್ಲಿ 15-16ನೇ ಶತಮಾನದಲ್ಲಿ ಜನಪ್ರಿಯವಾಗಿದ್ದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿದ್ದಾರು. ತನ್ನ ಕೃತಿಗಳ ಮೂಲಕ ಧಾರ್ಮಿಕ ಆಚರಣೆಗಳಲ್ಲಿದ್ದ ಜಾತಿ ಪದ್ಧತಿಯನ್ನು ಅವರು ತಿರಸ್ಕರಿಸಿದ್ದರು ಎಂದು ಸ್ಮರಿಸಿದರು.

ಕೆಪಿಸಿಸಿ ಸದಸ್ಯ ಮುನಿರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ ರಾಮಕೃಷ್ಣ, ಸದಸ್ಯರಾದ ಮುನಿಕೃಷ್ಣಪ್ಪ, ಗಂಗಾಧರ, ಹನುಮೇಗೌಡ, ಕುರುಬ ಸಮಾಜದ ಮುಖಂಡರಾದ ದೇವೇಂದ್ರ ಸ್ವಾಮಿ, ಕಿಟ್ಟಿ, ಗಂಗಾಧರ್, ಕೇಬಲ್ ಮಂಜು, ಸುನೀಲ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್, ಅಮರ ಜ್ಯೋತಿ ಆನಂದ್, ಸುರೇಶ್ ಬಾಬು ಹಾಜರಿದ್ದರು.

8ಕೆಡಿಬಿಪಿ7- ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ ಕನಕದಾಸ ಜಯಂತಿ ನಡೆಯಿತು.