ಸಾರಾಂಶ
- ದೂಡಾ ಅಧ್ಯಕ್ಷ ದಿನೇಶ ಶೆಟ್ಟಿ ಅಭಿಮತ । ಅನ್ನಸಂತರ್ಪಣೆ, ರಕ್ತದಾನ ಶಿಬಿರ - - -
ಕನ್ನಡಪ್ರಭ ವಾರ್ತೆ ದಾವಣಗೆರೆಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅಭಿಮಾನಿ ಬಳಗದಿಂದ ಗುರುವಾರ ನಗರದ ವಿನೋಬನಗರದ 2ನೇ ಮುಖ್ಯ ರಸ್ತೆಯ ಶ್ರೀ ರಾಮಕೃಷ್ಣ ಆಶ್ರಮದ ಬಳಿಯ ಡಾ.ವಿಷ್ಣುವರ್ಧನ್ ಪುತ್ಥಳಿ ಬಳಿ ಡಾ.ವಿಷ್ಣುವರ್ಧನ್ ಅವರ 75ನೇ ವರ್ಷದ ಜನ್ಮದಿನ ಸಂಭ್ರಮದಿಂದ ಆಚರಿಸಲಾಯಿತು.
ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಸಾಹಸ ಸಿಂಹ ವಿಷ್ಣುವರ್ಧನ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಅನ್ನ ಸಂತರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ನಮ್ಮ ಕನ್ನಡ ನಾಡಿನ ಮೇರುನಟರ ಪೈಕಿ ವಿಷ್ಣುವರ್ಧನ್ ಕೂಡ ಒಬ್ಬರು. ಅವರ ಚಿತ್ರಗಳು ಕುಟುಂಬ ಸಮೇತ ನೋಡುವಂತಹವಾಗಿದ್ದವು. ಅಂತಹ ನಟ ಇಂದು ನಮ್ಮೊಂದಿಗೆ ಇಲ್ಲ. ಅವರ ಜನ್ಮದಿನವನ್ನು ಇಂದು ಸಾರ್ವಜನಿಕರಿಗೆ, ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಮೂಲಕ ಸ್ಮರಣೆ ಮಾಡುತ್ತಿದ್ದೇವೆ. ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವುದು ನಮ್ಮ ಕನ್ನಡ ನಾಡಿಗೆ ಹೆಮ್ಮೆಯೆನಿಸಿದೆ. ಜೊತೆಗೆ ಅಭಿಮಾನಿಗಳಿಗೆ ಖುಷಿ ತಂದಿದೆ ಎಂದರು.
ಇದೇ ಸಂದರ್ಭದಲ್ಲಿ ಲಯನ್ಸ್ ರಕ್ತನಿಧಿ ಕೇಂದ್ರದಿಂದ ರಕ್ತದಾನ ಶಿಬಿರ ನಡೆಯಿತು. ಅನೇಕ ಅಭಿಮಾನಿಗಳು ರಕ್ತದಾನ ಮೂಲಕ ಜನ್ಮದಿನದ ಶುಭಾಶಯಗಳನ್ನು ತಿಳಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಪಾಲಿಕೆ ಮಾಜಿ ಸದಸ್ಯ ಎ.ನಾಗರಾಜ, ಅಭಿಮಾನಿ ಬಳಗದ ಸಂಸ್ಥಾಪಕ ಯೂಸುಫ್, ಕರವೇ ಜಿಲ್ಲಾಧ್ಯಕ್ಷ ಎಂ.ಎಸ್.ರಾಮೇಗೌಡ, ಸಂಕಲ್ಪ ಫೌಂಡೇಷನ್ ಅಧ್ಯಕ್ಷ ಮಹಾಂತೇಶ, ಸತೀಶ ಶೆಟ್ಟಿ, ಯುವರಾಜ್, ರಾಜು ಗೌಡ, ಮಾರುತಿರಾವ್, ಚಂದ್ರಶೇಖರ, ಸನಾ ಸೈಯದ್, ನಜೀರ್, ಸುವರ್ಣಮ್ಮ, ರೂಪ, ನೀತು , ರಕ್ತನಿಧಿ ಕೇಂದ್ರದ ಎನ್.ಎಚ್.ಮೌನೇಶ್ವರ, ಸೇರಿದಂತೆ ಅನೇಕರು ಭಾಗವಹಿಸಿದ್ದರು.
- - --18ಕೆಡಿವಿಜಿ49:
ದಾವಣಗೆರೆಯಲ್ಲಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅಭಿಮಾನಿ ಬಳಗದಿಂದ ನಡೆದ ವಿಷ್ಣುವರ್ಧನ್ ಜನ್ಮದಿನಾಚರಣೆಯಲ್ಲಿ ಅವರ ಪುತ್ಥಳಿಗೆ ದಿನೇಶ ಕೆ.ಶೆಟ್ಟಿ ಮಾಲಾರ್ಪಣೆ ಮಾಡಿದರು. -18ಕೆಡಿವಿಜಿ50:ದಾವಣಗೆರೆಯಲ್ಲಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅಭಿಮಾನಿ ಬಳಗದಿಂದ ವಿಷ್ಣುವರ್ಧನ್ ಜನ್ಮದಿನಾಚರಣೆ ಅಂಗವಾಗಿ ನಡೆದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ದಿನೇಶ ಕೆ. ಶೆಟ್ಟಿ ಉದ್ಘಾಟಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))