ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್‌ಗೆ ಕನ್ನಡ ಸಾಹಿತ್ಯ ಪರಿಷತ್ ಗೌರವ

| N/A | Published : Aug 25 2025, 01:00 AM IST

ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್‌ಗೆ ಕನ್ನಡ ಸಾಹಿತ್ಯ ಪರಿಷತ್ ಗೌರವ
Share this Article
  • FB
  • TW
  • Linkdin
  • Email

ಸಾರಾಂಶ

  ಹಿರಿಯ ಛಾಯಾಚಿತ್ರ ಪತ್ರಕರ್ತ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಮಾಧ್ಯಮ ಪ್ರತಿನಿಧಿ ಆಸ್ಟ್ರೋ ಮೋಹನ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್‌ ಉಡುಪಿ ತಾಲೂಕು ಘಟಕದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.

ಉಡುಪಿ: ಅಮೆರಿಕದ ಇಮೇಜ್ ಕಾಲಿಂಗ್ ಸೊಸೈಟಿ ಇಂಟರ್ನ್ಯಾಷನಲ್ ಇದರ ವತಿಯಿಂದ ಗೌರವ ಫೆಲೋಶಿಪ್ ಪ್ರಶಸ್ತಿಗೆ ಪಾತ್ರರಾದ ಹಿರಿಯ ಛಾಯಾಚಿತ್ರ ಪತ್ರಕರ್ತ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಮಾಧ್ಯಮ ಪ್ರತಿನಿಧಿ ಆಸ್ಟ್ರೋ ಮೋಹನ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್‌ ಉಡುಪಿ ತಾಲೂಕು ಘಟಕದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.

 ಪೂರ್ಣಪ್ರಜ್ಞ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ. ಸದಾಶಿವ ರಾವ್ ಸನ್ಮಾನ ನೆರವೇರಿಸಿ ಮಾತನಾಡಿ, ಆಸ್ಟ್ರೋ ಮೋಹನ್ ಅವರು ಕಳೆದ ಹಲವಾರು ವರ್ಷಗಳಿಂದ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಯನ್ನು ಗಳಿಸಿ ನಮ್ಮ ಉಡುಪಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇದು ನಾವೆಲ್ಲರೂ ಹೆಮ್ಮೆಪಡುವ ವಿಚಾರ ಎಂದರು.

ಕೆಎಂಸಿ ಮಣಿಪಾಲದ ಮೂಳೆ ರೋಗ ತಜ್ಞ ಡಾ. ಕಿರಣ ಆಚಾರ್ಯ ಶುಭ ಹಾರೈಸಿದರು. ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್‌ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ ಎಚ್. ಪಿ., ಕಸಾಪ ಉಡುಪಿ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜಿನಿ ವಸಂತ, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಸಾಂಸ್ಕೃತಿಕ ಕಾರ್ಯದರ್ಶಿ ವಸಂತ್, ಶ್ರೀನಿವಾಸ್, ದೀಪಾ ಕರ್ಕಿ, ವಿದ್ಯಾ ಶಾಮಸುಂದರ, ಪ್ರವೀಣಾ ಮೋಹನ್, ಪ್ರತಿಮಾ ಕಿರಣ್, ಪ್ರಸನ್ನ ಶ್ರೀನಿವಾಸ್ ಉಪಸ್ಥಿತರಿದ್ದರು.

Read more Articles on