ಸಂಘಟನೆ, ಸೇವೆಯಲ್ಲಿ ತೊಡಗಿದೆ ಕನ್ನಡ ಸಾಹಿತ್ಯ ಪರಿಷತ್ತು : ಸೂರಿ ಶ್ರೀನಿವಾಸ್

| Published : Apr 12 2025, 12:49 AM IST

ಸಂಘಟನೆ, ಸೇವೆಯಲ್ಲಿ ತೊಡಗಿದೆ ಕನ್ನಡ ಸಾಹಿತ್ಯ ಪರಿಷತ್ತು : ಸೂರಿ ಶ್ರೀನಿವಾಸ್
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾದ್ಯಂತ ಹೆಚ್ಚು ಕ್ರಿಯಾಶೀಲವಾಗಿ ಸಂಘಟನೆ ಮತ್ತು ಸೇವೆಯಲ್ಲಿ ತೊಡಗಿಕೊಂಡಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

ತರೀಕೆರೆಯಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ತರೀಕೆರೆ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾದ್ಯಂತ ಹೆಚ್ಚು ಕ್ರಿಯಾಶೀಲವಾಗಿ ಸಂಘಟನೆ ಮತ್ತು ಸೇವೆಯಲ್ಲಿ ತೊಡಗಿಕೊಂಡಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

ಶುಕ್ರವಾರ ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಿಕ್ಕಮಗಳೂರು ಜಿಲ್ಲಾ ಘಟಕ ಹಾಗೂ ತರೀಕೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾಶ್ರಯದಲ್ಲಿ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದಿ.ಟಿ.ಸಿ.ಬಸಪ್ಪ ತರೀಕೆರೆ ವಿಧಾನಸಭಾ ಕ್ಷೇತ್ರದ ಜನಪ್ರತಿನಿಧಿಯಾಗಿದ್ದರು, ಇವರ ಸೊಸೆ ಶಾಮಲ ಮಂಜುನಾಥ್ ಇವರ ಹೆಸರಲ್ಲಿ ದತ್ತಿ ನಿಧಿ ಹಾಗೂ ವಿಶೇಷವಾಗಿ ತರೀಕೆರೆ ಪಟ್ಟಣದಲ್ಲಿ 25 *30 ಅಳಳ್ಯ ನಿವೇಶನವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಭವನ ನಿರ್ಮಾಣಕ್ಕೆ ದಾನ ನೀಡಿ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಹೆಸರಿನಲ್ಲಿ ನಿವೇಶನ ನೋಂದಣಿಯಾಗಿರುವುದು ಪ್ರಥಮವಾಗಿದೆ. ಅನನ್ಯ ಸೇವೆಗಾಗಿ ದಾನಿ ಶಾಮಲ ಮಂಜುನಾಥ್ ಮತ್ತು ಅವರ ಕುಟುಂಬಕ್ಕೆ ಕೃತಜ್ಞತೆ ಸಲ್ಲಿಸಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚರಣ್ ರಾಜ್ ಮಾತನಾಡಿ ತಂದೆ ತಾಯಿ ಮತ್ತು ಪೋಷಕರು ಮಕ್ಕಳಿಗೆ ಕನ್ನಡ ಭಾಷೆ ಕಲಿಸುವ ಮೂಲಕ ಕನ್ನಡದ ಅಸ್ಮಿತೆ ಉಳಿಸಿ ಬೆಳೆಸಬೇಕು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಮ್ಮ ಅಂಗನವಾಡಿ ಕಾರ್ಯಕರ್ತರಿಗೆ ವಿಶೇಷ ದತ್ತಿ ಉಪನ್ಯಾಸ ಹಮ್ಮಿಕೊಂಡಿರುವುದು ಸಂತೋಷ ತಂದಿದೆ ಎಂದು ಹೇಳಿದರು.

ತಾಲೂಕು ಕಸಾಪ ಅಧ್ಯಕ್ಷ ರವಿ ದಳವಾಯಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾಹಿತ್ಯ ಪರಿಷತ್ತಿನಿಂದ ದತ್ತಿ ಉಪನ್ಯಾಸಹಮ್ಮಿಕೊಳ್ಳಲಾಗುತ್ತಿದೆ. ಸರ್ವರ ಸಹಕಾರ ಪಡೆದು ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಕ್ರಮ ವಹಿಸ ಲಾಗುವುದು. ಪಟ್ಟಣದಲ್ಲಿ ನಡೆದ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದ್ದು ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೋಶಧ್ಯಕ್ಷ ಬಿ.ಪ್ರಕಾಶ್ ದತ್ತಿ ಉಪನ್ಯಾಸ ಮಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಂಘಟನಾ ಕಾರ್ಯದರ್ಶಿ ನವೀನ್ ಪೆನ್ನಯ್ಯ ಕನ್ನಡ ಭವನ ನಿವೇಶನ ನೋಂದಣಿ ಪತ್ರವನ್ನು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಅವರಿಗೆ ಹಸ್ತಾಂತರಿಸಿದರು.

ದತ್ತಿ ದಾನಿಗಳಾದ ಶಾಮಲ ಮಂಜುನಾಥ್, ಕನ್ನಡಶ್ರೀ ಬಿ.ಎಸ್.ಭಗವಾನ್, ಕೆ.ಎಸ್.ಶಿವಣ್ಣ, ತಾ. ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಕಿರಣ್, ತಾಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ರಮಾಮಣಿ, ಮೇಲ್ವಿಚಾರಕರಾದ ಜ್ಯೋತಿ ಕುಂಬಾರ, ಸುನಿತಾ ಮತ್ತಿತರರು ಭಾಗವಹಿಸಿದ್ದರು.11ಕೆಟಿಆರ್.ಕೆ.2ಃ

ತರೀಕೆರೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಿಕ್ಕಮಗಳೂರು ಜಿಲ್ಲಾ ಘಟಕ ಹಾಗೂ ತರೀಕೆರೆ ತಾಲೂಕು ಕಸಾಪ ದಿಂದ ನಡೆದ ದತ್ತಿ ಉಪನ್ಯಾಸವನ್ನು ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಉದ್ಘಾಟಿಸಿದರು. ತಾ.ಕಸಾಪ ಅಧ್ಯಕ್ಷ ರವಿ ದಳವಾಯಿ, ದತ್ತಿ ದಾನಿಗಳಾದ ಶಾಮಲ ಮಂಜುನಾಥ್, ಕನ್ನಡಶ್ರೀ ಬಿ.ಎಸ್.ಭಗವಾನ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚರಣ್ ರಾಜ್ ಮತ್ತಿತರರು ಇದ್ದರು.