ತರೀಕೆರೆಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿ ಮತ್ತು ನಾಡು ನುಡಿ ಸಂರಕ್ಷಣೆ ಹಾಗೂ ಪ್ರಸಾರವೇ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯ ಉದ್ದೇಶ ಎಂದು ತಾಲೂಕು ಕಸಾಪ ಅಧ್ಯಕ್ಷ ರವಿ ದಳವಾಯಿ ಹೇಳಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ
ಕನ್ನಡಪ್ರಭ ವಾರ್ತೆ ತರೀಕೆರೆಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿ ಮತ್ತು ನಾಡು ನುಡಿ ಸಂರಕ್ಷಣೆ ಹಾಗೂ ಪ್ರಸಾರವೇ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯ ಉದ್ದೇಶ ಎಂದು ತಾಲೂಕು ಕಸಾಪ ಅಧ್ಯಕ್ಷ ರವಿ ದಳವಾಯಿ ಹೇಳಿದ್ದಾರೆ.ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು , ಜಿಲ್ಲಾ ಕಸಾಪ, ತರೀಕೆರೆ ತಾಲೂಕು ಕಸಾಪ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಹಯೋಗದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೈಸೂರು ನಾಲ್ವಡಿ ಕೃಷ್ಣರಾಜ ಒಡೆಯರ್ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಿದರು. ಸರ್.ಎಂ. ವಿಶ್ವೇಶ್ವರಯ್ಯ, ಶೇಷಾದ್ರಿ ಆಯ್ಯರ್ ಮುಂತಾದ ಮಹನೀಯರು ಕಸಾಪಗೆ ಹೆಚ್ಚಿನ ಪ್ರೋತ್ಸಾಹ ಮತ್ತು ಉತ್ತೇಜನ ನೀಡಿ ದರು. ಪರಿಷತ್ತು ಅಂದರೆ ಶ್ರದ್ಧೆ, ಸಾಹಿತ್ಯ ಎಂದರೆ ಜೀವನ, ಕನ್ನಡ ಎಂದರೆ ಅದು ನಮ್ಮ ನಾಡಿನ ಅಸ್ಮಿತೆ ಎಂದು ಹೇಳಿದರು.20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಎಚ್.ಎಂ.ಮರುಳಸಿದ್ದಯ್ಯ ಪಟೇಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಬೆಳೆಸಬೇಕು. ನಾಡು ನುಡಿ ಉಳಿಸಿ ಬೆಳೆಸಿ ಕನ್ನಡ ಸಾಹಿತ್ಯಕ್ಕೆ ಹೆಚ್ಚು ಉತ್ತೇಜನ ಕೊಡಬೇಕು ಎಂದು ಹೇಳಿದರು.ಕನ್ನಡಶ್ರೀ ಬಿ.ಎಸ್.ಭಗವಾನ್ ಮಾತನಾಡಿ ಕಸಾಪ ಸ್ವಾತಂತ್ರ್ಯ ಪೂರ್ವದಿಂದಲೇ ವಿಶಿಷ್ಟ ಕೊಡುಗೆ ನೀಡಿದೆ. ಕನ್ನಡ ಭಾಷೆ ಬಹು ವಿಸ್ತಾರವಾಗಿವಾಗಿ ಬೆಳೆದಿದೆ. ಕನ್ನಡ ಭಾಷೆ ಉಪಯೋಗಿಸಬೇಕು, ಕನ್ನಡ ನಾಡು ವಿಶಾಲವಾದ ಪ್ರಾಂತ್ಯ ಹೊಂದಿದೆ, ಕನ್ನಡ ಭಾಷೆ ಅತ್ಯಂತ ಸಾರಭರಿತ ಭಾಷೆ ಎಂದು ಹೇಳಿದರು. ಶರಣ ಸಾಹಿತ್ಯ ಪರಿಷತ್ತು ಪ್ರಧಾನ ಕಾರ್ಯದರ್ಶಿ, ಶಿಕ್ಷಕ ಚೇತನ್ ಗೌಡರು ಉಪನ್ಯಾಸ ನೀಡಿ ಮಾತನಾಡಿ ಮೈಸೂರು ಸಂಸ್ಥಾನದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕೈಗಾರಿಕೆ ಮತ್ತು ಕನ್ನಡ ಸಾಹಿತ್ಯದ ಬೆಳವಣಿಗೆಗೆ ಅಪಾರದ ಕೊಡುಗೆ ನೀಡಿದ್ದಾರೆ, ವಾಣಿ ವಿಲಾಸ ಸಾಗರವನ್ನು ರೈತಾಪಿ ಜನಸಮುದಾಯಕ್ಕೆ ನೀರಾವರಿ ಕಲ್ಪಿಸುವ ಮೂಲಕ ಆಹಾರ ಉತ್ಪಾದನೆಗೆ ಪ್ರೋತ್ಸಾಹ ನೀಡಿದ್ದಾರೆ ಎಂದು ಹೇಳಿದರು.ಕನ್ನಡ ಸಾಹಿತ್ಯ ಪೂರ್ವಾಧ್ಯಕ್ಷ ನಾಗೇನಹಳ್ಳಿ ತಿಮ್ಮಯ್ಯ ಮಾತನಾಡಿದರು. ಕಸಾಪ ಮಹಿಳಾ ಘಟಕ ಅಧ್ಯಕ್ಷೆ ಸುನಿತಾ ಕಿರಣ್, ಪ್ರಕೃತಿಶ್ರೀ ಕಲಾ ಕುಟೀರ ಅಧ್ಯಕ್ಷೆ ಉಮಾ ಪ್ರಕಾಶ್, ಕಸಾಪ ಲಕ್ಕವಳ್ಳಿ ಹೋಬಳಿ ಘಟಕ ಅಧ್ಯಕ್ಷ ಸಿ.ಚಕ್ರವರ್ತಿ, ಕಸಾಪ ಕೋಶಾಧ್ಯಕ್ಷರು ಕೆ.ಎಸ್.ಶಿವಣ್ಣ, ನವೀನ್, ಚಂದ್ರಶೇಖರ್ ವಿಭೂತಿ ಭಾಗವಹಿಸಿದ್ದರು.
-7ಕೆಟಿಆರ್.ಕೆ.2ಃ
ತರೀಕೆರೆಯಲ್ಲಿ ತಾಲೂಕು ಕಸಾಪ ಸಮಾರಂಭವನ್ನು 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಹೆಚ್.ಎಂ.ಮರುಳಸಿದ್ದಯ್ಯ ಪಟೇಲ್ ಉದ್ಘಾಟಿಸಿದರು. ತಾ.ಕಸಾಪ ಅಧ್ಯಕ್ಷ ರವಿ ದಳವಾಯಿ, ಕನ್ನಡಶ್ರೀ ಬಿ.ಎಸ್.ಭಗವಾನ್ ಮತ್ತಿತರರು ಭಾಗವಹಿಸಿದ್ದರು.