ದಿ. ಪರಮಾನಂದ ಸಾಲ್ಯಾನ್ ಬಹುಮುಖ ಪ್ರತಿಭೆಯ ವ್ಯಕ್ತಿತ್ವ ಉಳ್ಳವರಾಗಿದ್ದು, ಕಲಾಪೋಷಕರಾಗಿ , ಪತ್ರಕರ್ತರಾಗಿ, ಅವರ ಸಾಧನೆಗಳು ಅಪಾರ. ಸಮಾಜಕ್ಕೆ ಅವರ ಅಗಲಿಕೆ ತುಂಬಲಾರದ ನಷ್ಟ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು.

ಮೂಲ್ಕಿ: ದಿ. ಪರಮಾನಂದ ಸಾಲ್ಯಾನ್ ಬಹುಮುಖ ಪ್ರತಿಭೆಯ ವ್ಯಕ್ತಿತ್ವ ಉಳ್ಳವರಾಗಿದ್ದು, ಕಲಾಪೋಷಕರಾಗಿ , ಪತ್ರಕರ್ತರಾಗಿ, ಅವರ ಸಾಧನೆಗಳು ಅಪಾರ. ಸಮಾಜಕ್ಕೆ ಅವರ ಅಗಲಿಕೆ ತುಂಬಲಾರದ ನಷ್ಟ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು.

ಮೂಲ್ಕಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆದ ಪತ್ರಕರ್ತ ಹಾಗೂ ರಂಗಕರ್ಮಿ ದಿ. ಪರಮಾನಂದ ಸಾಲ್ಯಾನ್ ರವರ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.

ನಿವೃತ್ತ ಉಪನ್ಯಾಸಕ ಡಾ. ವಿ ಕೆ ಯಾದವ್ ಸಸಿಹಿತ್ಲು, ತುಳು ವರ್ಲ್ಡ್ ಫೌಂಡೇಶನ್ ಕಟೀಲು ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು , ಮೂಲ್ಕಿ ನಗರ ಪಂಚಾಯಿತಿ ನಿವೃತ್ತ ಮುಖ್ಯಾಧಿಕಾರಿ ಡಾ. ಹರಿಶ್ಚಂದ್ರ ಪಿ ಸಾಲ್ಯಾನ್ , ಹೆಜಮಾಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜ್ಮಾಡಿ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮೂಲ್ಕಿ ನ.ಪಂ ಮಾಜಿ ಸದಸ್ಯ ಹರ್ಷರಾಜ ಶೆಟ್ಟಿ, ಪತ್ರಕರ್ತ ಯಶೋಧರ ಕೋಟ್ಯಾನ್ , ಸಾಧು ಅಂಚನ್ ಮಟ್ಟು, ಮೂಲ್ಕಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಸುರತ್ಕಲ್ ನುಡಿ ನಮನ ಸಲ್ಲಿಸಿದರು. ಮೂಲ್ಕಿ ನಗರ ಪಂಚಾಯಿತಿ ಮಾಜಿ ಅಧ್ಯಕ್ಷೆ ಸರೋಜಿನಿ ಸುವರ್ಣ, ಮಾಜಿ ಸದಸ್ಯ ಉಮೇಶ್ ಮಾನಂಪಾಡಿ, ಎಸ್.ಆರ್ ಪ್ರದೀಪ್ ಸಸಿಹಿತ್ಲು, ಮೂಲ್ಕಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಪುನೀತ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು. ಪತ್ರಕರ್ತ ಮಿಥುನ್ ಕೊಡೆತ್ತೂರು ನಿರೂಪಿಸಿದರು. ಬಳಿಕ ದಿ. ಪರಮಾನಂದ ಸಾಲ್ಯಾನ್ ನಿಧನಕ್ಕೆ ಮೌನ ಪ್ರಾರ್ಥನೆ ಹಾಗೂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.