ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆ (ಕೆಪಿಎಸ್‌) ಶಾಲೆ ಆರಂಭಿಸಲು ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚುವುದಿಲ್ಲ, ಕನ್ನಡ ಶಾಲೆಗಳನ್ನು ಮುಚ್ಚುವುದಾಗಿ ಸಾಮಾಜಿಕ ಮಾಧ್ಯಮ ಹಾಗೂ ಪತ್ರಿಕಾ ಮಾಧ್ಯಮಗಳಲ್ಲಿ ಬರುವ ಸುದ್ದಿ ಸರಿಯಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದರು.

ಕನ್ನಡಪ್ರಭ ವಾರ್ತೆ ಸುವರ್ಣಸೌಧರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆ (ಕೆಪಿಎಸ್‌) ಶಾಲೆ ಆರಂಭಿಸಲು ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚುವುದಿಲ್ಲ, ಕನ್ನಡ ಶಾಲೆಗಳನ್ನು ಮುಚ್ಚುವುದಾಗಿ ಸಾಮಾಜಿಕ ಮಾಧ್ಯಮ ಹಾಗೂ ಪತ್ರಿಕಾ ಮಾಧ್ಯಮಗಳಲ್ಲಿ ಬರುವ ಸುದ್ದಿ ಸರಿಯಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದರು.

ಡಾ. ಚಿದಾನಂದಗೌಡ ಹಾಗೂ ಡಾ. ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈವರೆಗೆ ಯಾವುದೇ ಶಾಲೆ ಮುಚ್ಚುವುದಾಗಿ ತಾವು ಹೇಳಿಲ್ಲ. ಗ್ರಾಮೀಣ ಭಾಗದ ಮಕ್ಕಳು ಉತ್ತಮವಾದ ಶಿಕ್ಷಣ ಪಡೆಯಬೇಕು, ಪೂರ್ವ ಪ್ರಾಥಮಿಕದಿಂದ ಪದವಿಪೂರ್ವ ಶಿಕ್ಷಣ ಒಂದೇ ಸೂರಿನಡಿ ಸಿಗಬೇಕು ಎಂಬ ಕಾರಣದಿಂದ ಕೆಪಿಎಸ್‌ ಶಾಲೆ ಆರಂಭಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 309 ಕೆಪಿಎಸ್‌ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್‌ ಶಾಲೆಗಳಾಗಿ ಉನ್ನತೀಕರಿಸಲಾಗುತ್ತಿದೆ. ಕೆಪಿಎಸ್‌ ಶಾಲೆಗಳಲ್ಲಿ ಕಂಪ್ಯೂಟರ್‌ ಲ್ಯಾಬ್‌ ಹಾಗೂ ಸ್ಮಾರ್ಟ್‌ ಕ್ಲಾಸ್‌ ಸೌಲಭ್ಯ ಒದಗಿಸಲಾಗಿದೆ. ಜತೆಗೆ ಕೌಶಲ ಅಭಿವೃದ್ಧಿ ಶಿಕ್ಷಣ ನೀಡಲಾಗುತ್ತಿದೆ ಎಂದರು.

ಮುಂದಿನ ದಿನಗಳಲ್ಲಿ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆಪಿಎಸ್‌ ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮ ವಹಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಈ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಕಂಪ್ಯೂಟರ್‌ ಶಿಕ್ಷಣ ಪರಿಚಯ, ಭವಿಷ್ಯದ ವೃತ್ತಿಪರ ತರಬೇತಿಗಳನ್ನು 6ನೇ ತರಗತಿಯಿಂದ ಆರಂಭಿಸಲು, ಪಠ್ಯಕ್ರಮವನ್ನು ಉದ್ಯಮ ಪಾಲುದಾರರ ಸಹಾಯದಿಂದ ವಿನ್ಯಾಸಗೊಳಿಸಿ ಜಂಟಿ ಪ್ರಮಾಣ ಪತ್ರ ನೀಡಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.