ಕನ್ನಡ ಸಿರಿ ಪ್ರಶಸ್ತಿ ಪ್ರದಾನ

| Published : May 20 2025, 01:04 AM IST

ಕನ್ನಡ ಸಿರಿ ಪ್ರಶಸ್ತಿ ಪ್ರದಾನ
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ, ಕಳಸದ ಶ್ರೀ 1008 ಚಂದ್ರನಾಥಸ್ವಾಮಿ ಬಸದಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಪ್ರಥಮ ಜೈನ ಸಾಹಿತ್ಯ ಸಮ್ಮೇಳನದಲ್ಲಿ ತರೀಕೆರೆ ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಮತ್ತು ಪತ್ರಕರ್ತ ಅನಂತ ನಾಡಿಗ್ ಅವರಿಗೆ ಕನ್ನಡ ಸಿರಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ, ತರೀಕೆರೆ

ಕಳಸದ ಶ್ರೀ 1008 ಚಂದ್ರನಾಥಸ್ವಾಮಿ ಬಸದಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಪ್ರಥಮ ಜೈನ ಸಾಹಿತ್ಯ ಸಮ್ಮೇಳನದಲ್ಲಿ ತರೀಕೆರೆ ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಮತ್ತು ಪತ್ರಕರ್ತ ಅನಂತ ನಾಡಿಗ್ ಅವರಿಗೆ ಕನ್ನಡ ಸಿರಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಳಸದ ಶ್ರೀ 1008 ಭಗವಾನ್ ಚಂದ್ರನಾಥಸ್ವಾಮಿ ಬಸದಿ ಜೀರ್ಣೋದ್ದಾರ ಸಮಿತಿ ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಮತ್ತು ಪತ್ರಕರ್ತ ಅನಂತ ನಾಡಿಗ್ ಅವರು ಕನ್ನಡ ನಾಡು ನುಡಿ ಕಲೆ, ಸಾಹಿತ್ಯ ಸಾಂಸ್ಕೃತಿಕ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಗಣನೀಯ ಸೇವೆ ಪರಿಗಣಿಸಿ ಕನ್ನಡಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮ್ಮೇಳನಾಧ್ಯಕ್ಷ ವ್ಯಾಖ್ಯಾನ ವಾಚಸ್ಪತಿ ಡಾ.ಶ್ರೀವರ್ಮ ಹೆಗಡೆ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಪ್ರಧಾನ ಕಾರ್ಯದರ್ಶಿ ಪದ್ಮಿನಿ ನಾಗರಾಜ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ಜಿಲ್ಲಾ ಕಸಾಪ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್, 20ನೇ ಜಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ, ಡಾ.ಮರುಳಸಿದ್ದಯ್ಯ ಪಟೇಲ್, ರಾಜ್ಯ ಯುವ ಒಕ್ಕೂಟದ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಇಮ್ರಾನ್ ಅಹಮದ್ ಬೇಗ್, ಸೈಯದ್ ಮುಹಿಬುಲ್ಲಾ, ತರೀಕೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷ ನವೀನ್ ಪೆನ್ನಯ್ಯ, ವಕೀಲರಾದ ಕಿರಣ್ ಕುಮಾರ್, ಸುಮಂತ್, ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಸುನೀತ ಕಿರಣ್ ಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

19ಕೆಟಿಆರ್.ಕೆ.4ಃ

ಹಿರಿಯ ವಕೀಲರಾದ ಎಸ್.ಸುರೇಶ್ ಚಂದ್ರ ಮತ್ತು ಪತ್ರಕರ್ತ ಅನಂತ ನಾಡಿಗ್ ಅವರಿಗೆ ಕನ್ನಡ ಸಿರಿ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಯಿತು.