ಕನ್ನಡಪ್ರಭ ವರದಿ ಪರಿಣಾಮ: ಹಾಸ್ಟೆಲ್‌ಗಳಿಗೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭೇಟಿ

| Published : Feb 10 2024, 01:47 AM IST

ಕನ್ನಡಪ್ರಭ ವರದಿ ಪರಿಣಾಮ: ಹಾಸ್ಟೆಲ್‌ಗಳಿಗೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ಸರಣಿ ವರದಿ ಪ್ರಕಟಿಸಿದ ಬೆನ್ನಲ್ಲೇ ಎಚ್ಚೆತ್ತುಗೊಂಡ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪುಂಡಲೀಕ ಮಾನವರ ಇಂಡಿ ಹಾಗೂ ಚಡಚಣ ತಾಲೂಕಿನ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ ವಸತಿ ನಿಲಯಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು.

ಕನ್ನಡಪ್ರಭ ವಾರ್ತೆ ಇಂಡಿ

ಕನ್ನಡಪ್ರಭ ಸರಣಿ ವರದಿ ಪ್ರಕಟಿಸಿದ ಬೆನ್ನಲ್ಲೇ ಎಚ್ಚೆತ್ತುಗೊಂಡ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪುಂಡಲೀಕ ಮಾನವರ ಇಂಡಿ ಹಾಗೂ ಚಡಚಣ ತಾಲೂಕಿನ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ ವಸತಿ ನಿಲಯಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು.

ಹೊರ್ತಿ, ಹಲಸಂಗಿ, ಇಂಡಿ, ಧೂಳಖೇಡ ವಸತಿ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆಯನ್ನ ಆಲಿಸಿ, 15 ದಿನಗಳ ಒಳಗಾಗಿ ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಿ.ಕೆ.ಇಂಡಿ ಹಾಗೂ ವಸತಿ ನಿಲಯದ ನಿಲಯ ಪಾಲಕರು ಈ ಸಂದರ್ಭದಲ್ಲಿ ಇದ್ದರು.

ಸಾಲೋಟಗಿ ವಸತಿ ನಿಲಯಕ್ಕೆ ಸ್ನಾನಗೃಹ:

ಇಂಡಿ ತಾಲೂಕಿನ ಸಾಲೊಟಗಿ ಗ್ರಾಮದಲ್ಲಿರುವ ವಸತಿ ನಿಲಯದ ವಿದ್ಯಾರ್ಥಿಗಳು ವಸತಿ ನಿಲಯದ ಆವರಣದಲ್ಲಿ ಸ್ನಾನ ಮಾಡುವುದನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ಸಾಲೊಟಗಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಸ್ನಾನಗೃಹ ನಿರ್ಮಾಣಕ್ಕೆ ಬೇಕಾಗುವ ಇಟ್ಟಿಗೆ, ಮರಳು, ಸಿಮೆಂಟ್‌ ಕಳುಹಿಸಿ, ಕಟ್ಟಡ ಕಾರ್ಯಕ್ಕೆ ಮುಂದಾಗಿದ್ದಾರೆ.