ಸಾರಾಂಶ
ಕನ್ಯಾಡಿಯ ಯಕ್ಷಭಾರತಿ ಇದರ ದಶಮಾನೋತ್ಸವ ಪ್ರಯುಕ್ತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣಾ ಉಚಿತ ಶಿಬಿರ 13ರಂದು ಬೆಳಗ್ಗೆ 9ರಿಂದ ಅಪರಾಹ್ನ 1 ಗಂಟೆ ವರೆಗೆ ಕನ್ಯಾಡಿಯ ಹರಿಹರಾನುಗ್ರಹ ಸಭಾಭವನದಲ್ಲಿ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಕನ್ಯಾಡಿಯ ಯಕ್ಷಭಾರತಿ ಇದರ ದಶಮಾನೋತ್ಸವ ಪ್ರಯುಕ್ತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣಾ ಉಚಿತ ಶಿಬಿರ 13ರಂದು ಬೆಳಗ್ಗೆ 9ರಿಂದ ಅಪರಾಹ್ನ 1 ಗಂಟೆ ವರೆಗೆ ಕನ್ಯಾಡಿಯ ಹರಿಹರಾನುಗ್ರಹ ಸಭಾಭವನದಲ್ಲಿ ನಡೆಯಲಿದೆ.ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆ, ಮಂಗಳೂರಿನ ಯೆನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ದೇರಳಕಟ್ಟೆಯ ಜುಲೈಕಾ ಯೆನಪೋಯ ಕ್ಯಾನ್ಸರ್ ಆಸ್ಪತ್ರೆಯ ಸಹಕಾರದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗು ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶಿಬಿರ ಏರ್ಪಡಿಸಲಾಗಿದೆ.
ಶಿಬಿರದಲ್ಲಿ ಕ್ಯಾನ್ಸರ್ ತಪಾಸಣೆ, ವೈದ್ಯಕೀಯ ಶಾಸ್ತ್ರ ವಿಭಾಗ, ಮಕ್ಕಳ ವಿಭಾಗ, ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗ, ಮೂಳೆ ವಿಭಾಗ, ಕಿವಿ-ಮೂಗು-ಗಂಟಲು ವಿಭಾಗ, ಕಣ್ಣಿನ ಚಿಕಿತ್ಸಾ ವಿಭಾಗ, ಚರ್ಮ ರೋಗ ವಿಭಾಗ ಮತ್ತು ಮಧುಮೇಹ ತಪಾಸಣೆ ನಡೆಯಲಿದೆ.ಕಾರ್ಯಕ್ರಮವನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ಅಧ್ಯಕ್ಷತೆಯಲ್ಲಿ ಉಜಿರೆ ‘ಬದುಕು ಕಟ್ಟೋಣ ಬನ್ನಿ’ ತಂಡದ ಸಂಚಾಲಕ ಮೋಹನ ಕುಮಾರ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅಭ್ಯಾಗತರಾಗಿ ಡಾ.ಅಶ್ವಿನಿ ಎಸ್ ಶೆಟ್ಟಿ, ಡಾ.ಮುರಳಿಕೃಷ್ಣ ಇರ್ವತ್ರಾಯ, ಪೂರನ್ ವರ್ಮ, ವಿಮಲಾ, ದೇವದಾಸ್ ಶೆಟ್ಟಿ ಹಿಬರೋಡಿ, ಡಾ.ಮಹೇಶ್ ಕುಮಾರ್ ಶೆಟ್ಟಿ, ಪ್ರೀತಮ್ ಡಿ., ಜನಾರ್ದನ ಗೌಡ ಮತ್ತು ಗಂಗಾಧರ ರಾವ್ ಎಸ್. ಕೆವುಡೇಲು ಮೊದಲಾದವರು ಭಾಗವಹಿಸಲಿದ್ದಾರೆ.ಸಾರ್ವಜನಿಕರು ಉಚಿತ ಅರೋಗ್ಯ ಹಾಗು ಕ್ಯಾನ್ಸರ್ ತಪಾಸಣಾ ಶಿಬಿರದ ಪ್ರಯೋಜನ ಪಡೆಯುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.