ಸಾರಾಂಶ
ಕನ್ನಡಪ್ರಭ ವಾರ್ತೆ ಕಾಪುಇಲ್ಲಿನ ಮಜೂರು ಗ್ರಾ.ಪಂ. ವ್ಯಾಪ್ತಿಯಲ್ಲಿ 2,82,12,375 ರು. ಮೊತ್ತದಲ್ಲಿ 81 ವಿವಿಧ ಕಾಮಗಾರಿಗಳಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಅಹಾರ ಸಂಸ್ಕರಣಾ ಉದ್ಯಮ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಜೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಉಪಾಧ್ಯಕ್ಷೆಯಾದ ಮಂಜುಳಾ ಆಚಾರ್ಯ, ಮಾಜಿ ಶಾಸಕರಾದ ಲಾಲಾಜಿ ಮೆಂಡನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕಾಪು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ ಹಾಗೂ ಮಜೂರು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪ್ರಮುಖರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.ಉಪ ಅಂಚೆ ಕಚೇರಿ ನೂತನ ಕಟ್ಟಡ:ಪಡುಬಿದ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 55.65 ಲಕ್ಷ ರು. ಅನುದಾನದಲ್ಲಿ ನಿರ್ಮಾಣವಾಗಿರುವ ಪಡುಬಿದ್ರಿ ಉಪ ಅಂಚೆ ಕಚೇರಿ ನೂತನ ಕಟ್ಟಡವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಉದ್ಘಾಟಿಸಿದರು.ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಅಂಚೆ ಇಲಾಖೆ ಸಾರ್ವಜನಿಕರಿಗೆ ಉತ್ತಮವಾದ ಸೇವೆಯನ್ನು ನೀಡುತ್ತಾ ಬಂದಿದೆ. ಪಡುಬಿದ್ರಿ ಉಪ ಅಂಚೆ ಕಚೇರಿ ಜನಸಾಮಾನ್ಯರ ಕಚೇರಿಯಾಗಲಿ ಎಂದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಶಿಕಲಾ, ದಕ್ಷಿಣ ಕರ್ನಾಟಕ ವಲಯ ಅಂಚೆ ಸೇವೆಗಳ ಟಿ.ಎಸ್. ಅಶ್ವತ್ಥನಾರಾಯಣ ಹಾಗೂ ಪ್ರಮುಖರು ಉಪಸ್ಥಿತರಿದ್ದರು.