ಕಾಪು: ಶಿರ್ವದ ಎಂಎಸ್‌ಆರ್‌ಎಸ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

| Published : Feb 23 2025, 12:33 AM IST

ಕಾಪು: ಶಿರ್ವದ ಎಂಎಸ್‌ಆರ್‌ಎಸ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟ
Share this Article
  • FB
  • TW
  • Linkdin
  • Email

ಸಾರಾಂಶ

ಕಟಪಾಡಿಯ ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕಿರಣ್ ಕುಮಾರ್ ಶೆಟ್ಟಿ, ವಿದ್ಯಾರ್ಥಿಗಳ ತರಗತಿವಾರು ಆಕರ್ಷಕ ಪಥಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ, ಕ್ರೀಡಾ ಜ್ಯೋತಿಯನ್ನು ಬೆಳಗಿಸಿ, ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಶಿರ್ವ

ಇಲ್ಲಿನ ಸ್ಥಳೀಯ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ೪೫ನೇ ವಾರ್ಷಿಕ ಕ್ರೀಡಾಕೂಟವು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

ಕಟಪಾಡಿಯ ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕಿರಣ್ ಕುಮಾರ್ ಶೆಟ್ಟಿ, ವಿದ್ಯಾರ್ಥಿಗಳ ತರಗತಿವಾರು ಆಕರ್ಷಕ ಪಥಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ, ಕ್ರೀಡಾ ಜ್ಯೋತಿಯನ್ನು ಬೆಳಗಿಸಿ, ಕ್ರೀಡಾಕೂಟವನ್ನು ಉದ್ಘಾಟಿಸಿದರು.ಕ್ರೀಡೆಯಿಂದ ವ್ಯಕ್ತಿತ್ವ ವಿಕಸನಗೊಂಡು ಜೀವನದಲ್ಲಿ ಯಶಸ್ಸು, ಮಾನಸಿಕ ಹಾಗೂ ದೈಹಿಕ ಕ್ಷಮತೆ ಸಾಧಿಸಬಹುದು. ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸಿದಾಗ ಕ್ರೀಡೆಯ ಮಹತ್ವವನ್ನು ಉನ್ನತೀಕರಿಸಿದಂತಾಗುತ್ತದೆ ಮತ್ತು ಇದರಿಂದಾಗಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಮಿಥುನ್ ಚಕ್ರವರ್ತಿ, ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು.

ಕಾಲೇಜಿನ ಕ್ರೀಡಾ ಕಾರ್ಯದರ್ಶಿ ತೃತೀಯ ಬಿಸಿಎ ವಿದ್ಯಾರ್ಥಿನಿ ಚೇತನ ಪ್ರಮಾಣವಚನ ಬೋಧಿಸಿದರು. ಪ್ರಿಯಾಂಕ ಹಾಗೂ ಹೇಮಲತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಸೌಮ್ಯ ಕುಮಾರಿ ವಂದಿಸಿದರು.