ಸಾರಾಂಶ
ಕಾಪು ಮಂಡಲ ಬಿಜೆಪಿ ನೂತನ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಿತು.
ಕನ್ನಡಪ್ರಭ ವಾರ್ತೆ ಕಾಪು
ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ, ಕಾಪು ಮಂಡಲ ಬಿಜೆಪಿ ನೂತನ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇಲ್ಲಿನ ಹೊಟೇಲ್ ಕೆ೧ ಸಭಾಂಗಣದಲ್ಲಿ ಶನಿವಾರ ನಡೆಯಿತು.ಈ ಸಂದರ್ಭ ಮಾತನಾಡಿದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಬಡತನ, ಹಸಿವು ಅರಿತಿರುವ ಜನಸಮಾನ್ಯರಿಗೆ ಕೈಗೆಟಕುವ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಿದ ಕೂಡಲೇ ಅರ್ಧ ಯುದ್ಧವನ್ನು ಗೆದ್ದಂತೆ ಆಗಿದೆ ಎಂದರು.
ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಭೂತ ಪೂರ್ವ ಸಾಧನೆಗಳು ನಮ್ಮ ಗೆಲುವಿಗೆ ವರದಾನವಾಗಲಿದೆ ಎಂದರು.ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಮಂಗಳೂರು ಪ್ರಭಾರಿ ಉದಯ ಕುಮಾರ್ ಶೆಟ್ಟಿ, ರಾಜ್ಯ ಎಸ್‌ಸಿ ಮೋರ್ಚಾದ ದಿನಕರ ಬಾಬು, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ರೇಶ್ಮಾ ಉದಯ ಶೆಟ್ಟಿ, ನಾಯಕರಾದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಪ್ರಥ್ವಿರಾಜ್ ಬಿಲ್ಲಾಡಿ, ಶ್ಯಾಮಲಾ ಕುಂದರ್, ವಿವಿಧ ಮೋರ್ಚಗಳ ಪದಾಧಿಕಾರಿಗಳು ಇದ್ದರು.
ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ವಂದಿಸಿದರು. ಶರಣ್ ಕುಮಾರ್ ಹೆಜಮಾಡಿ ಕಾರ್ಯಕ್ರಮ ನಿರೂಪಿಸಿದರು.