ಕಾಪು: ಬಿಜೆಪಿ ಯುವ ಮೋರ್ಚಾದ ಯುವ ಚೌಪಾಲ್ ಚಾಲನೆ

| Published : Feb 26 2024, 01:35 AM IST

ಸಾರಾಂಶ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆಯಂತೆ ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಯುವ ಮತದಾರರನ್ನು ಸಂಪರ್ಕಿಸುವ ಯುವ ಚೌಪಾಲ್ ಸರಣಿ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕಾಪು

ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆಯಂತೆ ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಯುವ ಮತದಾರರನ್ನು ಸಂಪರ್ಕಿಸುವ ಯುವ ಚೌಪಾಲ್ ಸರಣಿ ಕಾರ್ಯಕ್ರಮವನ್ನು ಭಾನುವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

ನಂತರ ಮಾತನಾಡಿದ ಶಾಸಕರು, ಕ್ಷೇತ್ರದ ಪ್ರತಿ ಗ್ರಾಮಗಳಲ್ಲಿಯೂ ಯುವ ಮೋರ್ಚಾದ ಮೂಲಕ ಯುವ ಮತದಾರರನ್ನು ಸಂಘಟಿಸಿ ನರೇಂದ್ರ ಮೋದಿ ಅವರ ಸಾಧನೆ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸಿ ಮೂರನೇ ಬಾರಿಗೆ ಪ್ರಧಾನಿಯನ್ನಾಗಿಸಲು ಕಟಿಬದ್ಧರಾಗೋಣ ಎಂದರು. ಸಮಾರಂಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಯುವ ಮೋರ್ಚಾ ಅಧ್ಯಕ್ಷ ಸಚಿನ್, ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಕಾಪು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಶೆಟ್ಟಿ, ಶಕ್ತಿ ಕೇಂದ್ರದ ಸಂಚಾಲಕ ಪ್ರವೀಣ್ ಶೆಟ್ಟಿ, ಇನ್ನಂಜೆ ಗ್ರಾ.ಪಂ. ಸದಸ್ಯರಾದ ಸೋನು ಪಾಂಗಾಳ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಇದ್ದರು.

ಬಿಜೆಪಿ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಸೂಚನೆಯ ಮೇರೆಗೆ ಯುವ ಚೌಪಾಲ್‌ ಕಾರ್ಯಕ್ರಮ ನಡೆಯುತ್ತಿದೆ. ಉಡುಪಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಯುವ ಚೌಪಾಲ್‌ ಅಭಿಯಾನ ನಡೆಯಿತು. ಈ ಅಭಿಯಾನದಲ್ಲಿ ಹೊಸ ಮತದಾರರನ್ನು ಸಂಪರ್ಕಿಸಿ ಅವರಿಗೆ ಮೋದಿ ಸರ್ಕಾರದ ಸಾಧನೆಯ ಬಗ್ಗೆ ತಿಳಿಸುವುದು ಮತ್ತು ಅವರನ್ನು ಪಕ್ಷದ ಮತದಾರರನ್ನಾಗಿವುದು ಉದ್ದೇಶವಾಗಿದೆ.