ಸಾರಾಂಶ
ಕಾಪು ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟವು ಶಿರ್ವ ಸಂತ ಮೇರಿ ಪ.ಪೂ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಸಂಚಾಲಕ ರೆ। ಫಾ। ಡಾ। ಲೆಸ್ಲಿ ಡಿಸೋಜ ಉದ್ಘಾಟಿಸಿ ಶುಭ ಹಾರೈಸಿದರು.
ಕನ್ನಡಪ್ರಭ ವಾರ್ತೆ ಕಾಪು
ಉಡುಪಿ ಜಿ.ಪಂ., ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಶಿರ್ವ ಡಾನ್ ಬೊಸ್ಕೊ ಹಿ. ಪ್ರಾ. ಶಾಲೆ ಸಹಯೋಗದಲ್ಲಿ ಕಾಪು ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟವು ಆ. 6 ರಂದು ಶಿರ್ವ ಸಂತ ಮೇರಿ ಪ.ಪೂ.ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.ಶಿರ್ವ ಸಂತ ಮೇರಿ ಮತ್ತು ಡಾನ್ ಬೊಸ್ಕೊ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ|ಫಾ| ಡಾ|ಲೆಸ್ಲಿ ಡಿಸೋಜಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಇನ್ನಂಜೆ ಎಸ್.ವಿ.ಎಚ್. ಪ.ಪೂ.ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ಶಿರ್ವ ಚರ್ಚ್ ಪಾಲನ ಮಂಡಳಿ ಉಪಾಧ್ಯಕ್ಷ ಮೆಲ್ವಿನ್ ಅರಾನ್ಹಾ, ಸಂತ ಮೇರಿ ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನೋರ್ಬರ್ಟ್ ಇ .ಮಚಾದೋ ವೇದಿಕೆಯಲ್ಲಿದ್ದರು.
ಸಂತ ಮೇರಿ ಪ.ಪೂ.ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ವಿಲಿಯಂ ವೇಗಸ್, ಪಡುಬೆಳ್ಳೆ ಶ್ರೀ ನಾರಾಯಣಗುರು ಕನ್ನಡ ಮಾಧ್ಯಮ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್ ದೇವಾಡಿಗ ಮತ್ತು ಕಾಪು ವೃತ್ತ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾನ್ ಬೊಸ್ಕೊ ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಪೌಲಿನ್ ಲೋಬೋ ಸ್ವಾಗತಿಸಿದರು. ಶಿಕ್ಷಕಿ ಆಲ್ವಿಯಾ ಅರಾನ್ಹಾ ನಿರೂಪಿಸಿದರು. ಶಿಕ್ಷಕಿ ಸವಿತಾ ವಂದಿಸಿದರು.