ಸಾರಾಂಶ
ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಗಳ ಕಚೇರಿ, 9 ಸೇವಾ ಕೌಂಟರ್, ಮೀಟಿಂಗ್ ಹಾಲ್ ಒಳಗೊಂಡಿರುವ ಈ ಸುಸಜ್ಜಿತ ಕಟ್ಟಡದ ಕಾಮಗಾರಿಗೆ ಕ್ಷೇತ್ರದ ಪ್ರಧಾನ ತಂತ್ರಿಗಳಾದ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳೊಂದಿಗೆ ಶಂಕುಸ್ಥಾಪನೆ ಮಾಡಲಾಯಿತು.
ಕನ್ನಡಪ್ರಭ ವಾರ್ತೆ ಕಾಪು
ಸಂಪೂರ್ಣ ಜೀರ್ಣೋದ್ಧಾರಗೊಳ್ಳುತ್ತಾ ಬ್ರಹ್ಮಕಲಶೋತ್ಸವದ ಸಿದ್ಧತೆಯಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ನವದುರ್ಗಾ ಮಂಟಪದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಯಿತು.ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಗಳ ಕಚೇರಿ, 9 ಸೇವಾ ಕೌಂಟರ್, ಮೀಟಿಂಗ್ ಹಾಲ್ ಒಳಗೊಂಡಿರುವ ಈ ಸುಸಜ್ಜಿತ ಕಟ್ಟಡದ ಕಾಮಗಾರಿಗೆ ಕ್ಷೇತ್ರದ ಪ್ರಧಾನ ತಂತ್ರಿಗಳಾದ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳೊಂದಿಗೆ ಶಂಕುಸ್ಥಾಪನೆ ಮಾಡಲಾಯಿತು.
ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ ನೇತೃತ್ವದಲ್ಲಿ ಗ್ರಾಮದೇವರಾದ ಒಡೆಯ ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಾನದಲ್ಲಿ ಪ್ರಾರ್ಥಿಸಿ, ಬಳಿಕ ಕಾಪು ಶಾಸಕ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ, ದೇವಳದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ ಯೋಗೀಶ್ ವಿ. ಶೆಟ್ಟಿ, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮನೋಹರ್ ಎಸ್. ಶೆಟ್ಟಿ , ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ. ಶೆಟ್ಟಿ ಶಂಕುಸ್ಥಾಪನೆಯನ್ನು ನೆರವೇರಿಸಿದರು.ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ನವದುರ್ಗೆಯರ ಹೆಸರಿನ ಚೀಟಿಯನ್ನು ತೆಗೆಯುವ ಮೂಲಕ ಕೊರಂಗ್ರಪಾಡಿ ದೊಡ್ಡಮನೆ ನೇತ್ರಾವತಿ ಶೆಡ್ತಿಯವರ ಸ್ಮರಣಾರ್ಥ ಕಾಪು ದೇವಿ ಪ್ರಸಾದ್ ಕನ್‌ಸ್ಟ್ರಕ್ಷನ್ ಆಡಳಿತ ನಿರ್ದೇಶಕಿ ಬೀನಾ ವಾಸುದೇವ ಶೆಟ್ಟಿ ಅವರು ಕಟ್ಟಡ ನಿರ್ಮಿಸಿ ಕೊಡುವುದಾಗಿ ಗುತ್ತಿಗೆದಾರ ಪರಮೇಶ್ ಆಚಾರ್ಯ ಅವರಿಗೆ ಪ್ರಸಾದ ನೀಡಿ ಅಡ್ವಾನ್ಸ್ ನೀಡುವ ಮೂಲಕ ಕಟ್ಟಡ ಕಾಮಗಾರಿಗೆ ಚಾಲನೆಯನ್ನು ನೀಡಲಾಯಿತು.
ಈ ಸಂದರ್ಭ ಮಾಜಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಅನಿಲ್ ಬಳ್ಳಾಲ್ ಕಾಪು ಬೀಡು, ಉಪಾಧ್ಯಕ್ಷ ಮಾಧವ ಆರ್. ಪಾಲನ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ, ನವದುರ್ಗಾ ಲೇಖನ ಯಜ್ಞ ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣಪ್ರಸಾದ್ ಅಡ್ಯಂತಾಯ ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು, ಮುಖ್ಯ ಸಂಚಾಲಕರು, ಸಂಚಾಲಕರು ಉಪಸ್ಥಿತರಿದ್ದರು.