ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ನವದುರ್ಗಾ ಲೇಖನ ಯಜ್ಞಕ್ಕೆ ಚಾಲನೆ

| Published : Oct 30 2024, 12:31 AM IST / Updated: Oct 30 2024, 12:32 AM IST

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ನವದುರ್ಗಾ ಲೇಖನ ಯಜ್ಞಕ್ಕೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಕಾಪು ಮಾರಿಯಮ್ಮನ ಸನ್ನಿಧಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಲೋಕ ಕಲ್ಯಾಣಾರ್ಥವಾಗಿ ಮತ್ತು ಸಾನ್ನಿಧ್ಯ ವೃದ್ಧಿಗಾಗಿ 99,999 ನವದುರ್ಗಾ ಲೇಖನವನ್ನು ಬರೆಯುವ ಮಹಾ ಸಂಕಲ್ಪವನ್ನು ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಕಾಪು

ಸಂಪೂರ್ಣ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಮಾರಿಯಮ್ಮನ ಸನ್ನಿಧಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಲೋಕ ಕಲ್ಯಾಣಾರ್ಥವಾಗಿ ಮತ್ತು ಸಾನ್ನಿಧ್ಯ ವೃದ್ಧಿಗಾಗಿ 99,999 ನವದುರ್ಗಾ ಲೇಖನವನ್ನು ಬರೆಯುವ ಮಹಾ ಸಂಕಲ್ಪವನ್ನು ಹಮ್ಮಿಕೊಳ್ಳಲಾಗಿದೆ.ಈ ಲೇಖನ ಯಜ್ಞಕ್ಕೆ ಮಂಗಳವಾರ ವಾಗೀಶ್ವರಿ ಪೂಜೆಯ ಮೂಲಕ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ನವದುರ್ಗಾ ಲೇಖನ ಬರೆಯುವ ಮುಖಾಂತರ ಶ್ರೀ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.

ಉಭಯ ಶ್ರೀಪಾದರು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ. ಬಂಜಾರ ಪ್ರಕಾಶ ಶೆಟ್ಟಿ, ಕೊಲ್ಲೂರು ಮುಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳ‍ಿಯ ಅಧ್ಯಕ್ಷ ಬಾಬು ಹೆಗ್ಡೆ, ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದ ಕೋಶಾಧಿಕಾರಿ ಪದ್ಮರಾಜ್, ಲೇಖಕಿ ವೀಣಾ ಬನ್ನಂಜೆ, ಪಡುಬಿದ್ರಿ ಕೊರಗ ಕೂಡುಕಟ್ಟಿನ ಗುರಿಕಾರ ಬಾಲರಾಜ್ ಕೋಡಿಕ್ಕಲ್, ಶಿಕ್ಷಣತಜ್ಞೆ ಮಾಲಿನಿ ಹೆಬ್ಬಾರ್ ಮತ್ತು ಉಷಾ ಆನಂದ ಸುವರ್ಣ ಅವರು ನವದುರ್ಗಾ ಲೇಖನ ಬರೆದು ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು.

ಕಾಪು ಶಾಸಕ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಉಪಾಧ್ಯಕ್ಷ ಮನೋಹರ್ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ರಘುಪತಿ ಭಟ್, ಕಾರ್ಯಾಧ್ಯಕ್ಷ ಕೃಷ್ಣಪ್ರಸಾದ್ ಅಡ್ಯಂತಾಯ, ಪ್ರಮುಖರಾದ ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಉಪಾಧ್ಯಕ್ಷರಾದ ಹರಿಯಪ್ಪ ಕೋಟ್ಯಾನ್, ಡಾ. ವಿದ್ಯಾ ಶಂಕರ್ ಶೆಟ್ಟಿ, ಅಶೋಕ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಬಾಲಾಜಿ, ಕೋಶಾಧಿಕಾರಿ ಕೆ.ವಿಶ್ವನಾಥ್, ಹುಬ್ಬಳ್ಳಿ- ಧಾರವಾಡ ಸಮಿತಿ ಕಾರ್ಯಾಧ್ಯಕ್ಷ ಸುಗ್ಗಿ ಸುಧಾಕರ್ ಶೆಟ್ಟಿ, ಲೇಖನ ಯಜ್ಞ ಸಮಿತಿ ಮಂಗಳೂರು ಸಮಿತಿ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಸಂದೀಪ್ ಮಂಜ, ಸಂಚಾಲಕರಾದ ಸುವರ್ಧನ್ ನಾಯಕ್, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಸಮಿತಿ ಸದ್ಯಸರು ಉಪಸ್ಥಿತರಿದ್ದರು.