ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಮುಂಬೈಯಲ್ಲಿ ಸ್ವರ್ಣಗೌರಿ ಪೂಜೆ

| Published : Oct 18 2024, 12:09 AM IST / Updated: Oct 18 2024, 12:10 AM IST

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಮುಂಬೈಯಲ್ಲಿ ಸ್ವರ್ಣಗೌರಿ ಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಿಯ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮತ್ತು ನವದುರ್ಗಾ ಲೇಖನ ಯಜ್ಞ ಯಶಸ್ವಿಯಾಗಿ, ವಿಜೃಂಭಣೆಯಿಂದ ನಡೆಸುವ ನಿಟ್ಟಿನಲ್ಲಿ ಭರದ ಸಿದ್ಧತೆಗಳಾಗುತ್ತಿವೆ.

ಕನ್ನಡಪ್ರಭ ವಾರ್ತೆ ಕಾಪು‌

ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಿಯ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮತ್ತು ನವದುರ್ಗಾ ಲೇಖನ ಯಜ್ಞ ಯಶಸ್ವಿಯಾಗಿ, ವಿಜೃಂಭಣೆಯಿಂದ ನಡೆಸುವ ನಿಟ್ಟಿನಲ್ಲಿ ಭರದ ಸಿದ್ಧತೆಗಲಾಗುತ್ತಿವೆ.

ಈ ಉತ್ಸವದಲ್ಲಿ ಮುಂಬೈನಲ್ಲಿರುವ ಊರಿನ ಬಂಧುಗಳು ಪಾಲ್ಗೊಳ್ಳುವಂತೆ ಆಮಂತ್ರಿಸಲು ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ‌ ಯಜ್ಞ ಸಮಿತಿ ಪದಾಧಿಕಾರಿಗಳು ಮುಂಬೈಗೆ ತೆರಳಿದ್ದು, ಮುಂಬೈ ಬಂಟರ ಭವನದಲ್ಲಿ ನಡೆದ ಸ್ವರ್ಣಗೌರಿ ಪೂಜೆಯಲ್ಲಿ ಭಾಗವಹಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ಸ್ವರ್ಣ ಸಮರ್ಪಣಾ ಸಮಿತಿ ಅಧ್ಯಕ್ಷ ರವಿ ಸುಂದರ್ ಶೆಟ್ಟಿ, ಮುಂಬೈ ಬಂಟರ ಸಂಘ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಮುಂಬೈ ಸಮಿತಿ ಅಧ್ಯಕ್ಷ ಸುಧಾಕರ ಹೆಗ್ಡೆ ತುಂಗಾ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ‌ ಆರ್‌‌. ಮೆಂಡನ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲಬೆಟ್ಟು, ವಿಶ್ವಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪ್ರಮುಖರಾದ ಆನಂದ ಶೆಟ್ಟಿ, ಡಾ. ದೇವಿಪ್ರಸಾದ್ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಯೋಗೀಶ್ ಶೆಟ್ಟಿ ಬಾಲಾಜಿ, ಕೆ. ವಿಶ್ವನಾಥ, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ‌ ಯಜ್ಞ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.