ಸಾರಾಂಶ
ಉಡುಪಿ ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ ಕಾಪು ವಿಧಾನ ಸಭಾ ಕ್ಷೇತ್ರದ 17 ಪ್ರೌಢಶಾಲಾ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ ‘ಕಿಶೋರ ಯಕ್ಷಗಾನ ಸಂಭ್ರಮ-೨೦೨೪’ದ ಉದ್ಫಾಟನೆ ಶಿರ್ವದ ಮಹಿಳಾ ಸೌಧದಲ್ಲಿ ಡಿ.೧೫ರಂದು ನಡೆಯಿತು. ನಿವೃತ್ತ ಪ್ರಾಧ್ಯಾಪಕಿ ಶಾರದಾ ಎಂ. ದೀಪ ಪ್ರಜ್ವಲನಗೊಳಿಸಿ ಪ್ರದರ್ಶನಕ್ಕೆ ವಿದ್ಯುಕ್ತ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಕಾಪು
ಉಡುಪಿ ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ ಕಾಪು ವಿಧಾನ ಸಭಾ ಕ್ಷೇತ್ರದ 17 ಪ್ರೌಢಶಾಲಾ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ ‘ಕಿಶೋರ ಯಕ್ಷಗಾನ ಸಂಭ್ರಮ-೨೦೨೪’ದ ಉದ್ಫಾಟನೆ ಶಿರ್ವದ ಮಹಿಳಾ ಸೌಧದಲ್ಲಿ ಡಿ.೧೫ರಂದು ನಡೆಯಿತು. ನಿವೃತ್ತ ಪ್ರಾಧ್ಯಾಪಕಿ ಶಾರದಾ ಎಂ. ದೀಪ ಪ್ರಜ್ವಲನಗೊಳಿಸಿ ಪ್ರದರ್ಶನಕ್ಕೆ ವಿದ್ಯುಕ್ತ ಚಾಲನೆ ನೀಡಿದರು.ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಸುರೇಶ ಶೆಟ್ಟಿ, ಯಕ್ಷಗಾನ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುತ್ತದೆ. ಈ ಹಿನ್ನೆಲೆಯಲ್ಲಿ ಇನ್ನಷ್ಟು ಶಾಲೆಗಳು ಯಕ್ಷಶಿಕ್ಷಣಕ್ಕೆ ಆಸಕ್ತಿ ತೋರಿಸಬೇಕಾಗಿದೆ ಎಂದರು.ವೇದಿಕೆಯಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಉಪಾಧ್ಯಕ್ಷರಾದ ಎಸ್.ವಿ. ಭಟ್, ವಿ.ಜಿ. ಶೆಟ್ಟಿ, ವಿಠಲ್ ಬಿ. ಅಂಚನ್, ಕೆ. ಶ್ರೀಧರ ಕಾಮತ್, ನಾರಾಯಣ ಎಂ. ಹೆಗಡೆ, ನಟರಾಜ ಉಪಾಧ್ಯಾಯ ಉಪಸ್ಥಿತರಿದ್ದರು.ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರದರ್ಶನ ಸಂಘಟನಾ ಸಮಿತಿಯ ಸಂಚಾಲಕ ಕೆ. ಶ್ರೀಪತಿ ಕಾಮತ್ ಸ್ವಾಗತಿಸಿದರು. ಅನಂತ ಮೂಡಿತ್ತಾಯರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.ಸಭಾ ಕಾರ್ಯಕ್ರಮದ ನಂತರ ಇನ್ನಂಜೆಯ ಎಸ್.ವಿ.ಎಚ್. ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಶಾಂತರಾಮ ಆಚಾರ್ಯ ನಿರ್ದೇಶನದಲ್ಲಿ ‘ಶಶಿಪ್ರಭಾ ಪರಿಣಯ’, ಕುತ್ಯಾರಿನ ಸೂರ್ಯಚೈತನ್ಯ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ‘ಸುದರ್ಶನ ವಿಜಯ’ ಯಕ್ಷಗಾನ ಜರುಗಿತು.