ಸಾರಾಂಶ
ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ವ್ಯಾಪ್ತಿಯ ಫಲಾನುಭವಿಗಳಿಗೆ 94/ಸಿ ಹಾಗೂ 94/ಸಿಸಿ ಅಡಿಯಲ್ಲಿ ಕಾಯಂ ನಿವೇಶನ ಹಕ್ಕುಪತ್ರಗಳನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸೋಮವಾರ ಹಿರಿಯಡಕ ಗ್ರಾಮ ಪಂಚಾಯಿತಿಯಲ್ಲಿ ವಿತರಿಸಿದರು.
ಕನ್ನಡಪ್ರಭ ವಾರ್ತೆ ಕಾಪುಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ವ್ಯಾಪ್ತಿಯ ಫಲಾನುಭವಿಗಳಿಗೆ 94/ಸಿ ಹಾಗೂ 94/ಸಿಸಿ ಅಡಿಯಲ್ಲಿ ಕಾಯಂ ನಿವೇಶನ ಹಕ್ಕುಪತ್ರಗಳನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸೋಮವಾರ ಹಿರಿಯಡಕ ಗ್ರಾಮ ಪಂಚಾಯಿತಿಯಲ್ಲಿ ವಿತರಿಸಿದರು.ಸುಮಾರು 20ಕ್ಕೂ ಅಧಿಕ ವರ್ಷಗಳಿಂದ ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಾಗಿರುವ 20 ಫಲಾನುಭವಿಗಳಿಗೆ ಹಾಗೂ ಕುಕ್ಕೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಾಗಿರುವ 11 ಫಲಾನುಭವಿಗಳಿಗೆ ಮತ್ತು ಪೆರ್ಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಫಲಾನುಭವಿಗಳಿಗೆ ಹಾಗೂ 80 ಬಡಗಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1 ಫಲಾನುಭವಿಗೆ ಸೇರಿದಂತೆ ಒಟ್ಟು 34 ಫಲಾನುಭವಿಗೆ 94/ಸಿ ಹಾಗೂ 94/ಸಿಸಿ ಅಡಿಯಲ್ಲಿ ಕಾಯಂ ನಿವೇಶನ ಹಕ್ಕುಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶೆಟ್ಟಿ, ಕುಕ್ಕೆಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುರಂದರ ಕೋಟ್ಯಾನ್, ಪೆರ್ಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೇತನಾ ಶೆಟ್ಟಿ, ಉಪಾಧ್ಯಕ್ಷ ದೇವು ಪೂಜಾರಿ, 80 ಬಡಗಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ ಕೋಟ್ಯಾನ್ ಹಾಗೂ ಉಡುಪಿ ತಹಸೀಲ್ದಾರ ಗುರುರಾಜ್ ಹಾಗೂ ಕಂದಾಯ ನಿರೀಕ್ಷರು, ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.