ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಪದಗ್ರಹಣ

| Published : Mar 25 2024, 12:50 AM IST

ಸಾರಾಂಶ

ಕಾಪು ಮಂಡಲ ಬಿಜೆಪಿಯ ನೂತನ ಯುವ ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮಾಜಿ ಶಾಸಕ ಲಾಲಾಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಕಾಪು

ಕಾಪು ಮಂಡಲ ಬಿಜೆಪಿಯ ನೂತನ ಯುವ ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮಾಜಿ ಶಾಸಕ ಲಾಲಾಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಸಮಾರಂಭದಲ್ಲಿ ಶಾಸಕ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿ ಮಾತನಾಡಿ, ಈ ದೇಶದ ಮುಂದಿನ ಭವಿಷ್ಯ ಯುವ ಸಮುದಾಯದ ಕೈಯಲ್ಲಿದೆ. ಯುವ ಸಮುದಾಯ ಈ ದೇಶದ ಮುಂದಿನ ಶಕ್ತಿ, ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಬೇಕು ಎಂದು ಹೇಳಿದ ಅವರು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ‘ಒನ್ ಬೂತ್ ಟೆನ್ ಯೂತ್’ ಎಂಬ ಪಕ್ಷದ ವರಿಷ್ಠರ ಸೂಚನೆಯಂತೆ ತಳಮಟ್ಟದಲ್ಲಿ ಪಕ್ಷಕ್ಕೆ ಹೊಸ ಯುವ ಮತದಾರರನ್ನು ಸೇರ್ಪಡೆಗೊಳಿಸಿ ಸಂಘಟಿಸಬೇಕು ಎಂದರು.ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸೋನು ಪಾಂಗಾಳ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಸಚಿನ್, ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ ಮತ್ತು ಶಶಾಂಕ್ ಶಿವತ್ತಾಯ, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಂಜಿತ್ ಶೆಟ್ಟಿ ಮಟ್ಟಾರು ಹಾಗೂ ಕಾಪು ಮಂಡಲ ಬಿಜೆಪಿ ಮತ್ತು ಯುವ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.