ಸಾರಾಂಶ
ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಜಾಗತಿಕ ಬಂಟರ ಸಂಘದ ಒಕ್ಕೂಟದ ವತಿಯಿಂದ ಬೃಹತ್ ಹೊರೆ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಜಾಗತಿಕ ಬಂಟರ ಸಂಘದ ಒಕ್ಕೂಟದ ವತಿಯಿಂದ ಬೃಹತ್ ಹೊರೆ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಡೆಯಿತು.ಮೂಲ್ಕಿಯ ಜಾಗತಿಕ ಬಂಟರ ಸಂಘದ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಬಳಿ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬೃಹತ್ ಹೊರೆ ಕಾಣಿಕೆ ಮೆರವಣಿಗೆ ಸಮರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಒಕ್ಕೂಟ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪದಾಧಿಕಾರಿಗಳಾದ ಡಾ. ಪಿ.ವಿ. ಶೆಟ್ಟಿ, ಚಂದ್ರಹಾಸ ಶೆಟ್ಟಿ ಬಂಟ್ವಾಳ, ಶಶಿಧರ ಶೆಟ್ಟಿ ಇನ್ನಂಜೆ, ದೇವಪ್ಪ ಶೇಖ, ಜಯಕರ ಶೆಟ್ಟಿ ಇಂದ್ರಾಳಿ, ಮನೋಹರ್ ಶೆಟ್ಟಿ ತೋನ್ಸೆ, ಅಶೋಕ್ ಶೆಟ್ಟಿ ಮೂಲ್ಕಿ, ಸಂತೋಷ್ ಕುಮಾರ್ ಹೆಗ್ಡೆ ಎಳತ್ತೂರು, ಪುರುಷೋತ್ತಮ ಶೆಟ್ಟಿ, ರತ್ನಾಕರ ಶೆಟ್ಟಿ ಮುಂಡ್ಕೂರು, ಕೊಲ್ಲಾಡಿ ಬಾಲಕೃಷ್ಣ ರೈ, ಅಮರೇಶ್ ಶೆಟ್ಟಿ ತಿರುವಾಜೆ, ಸಂತೋಷ್ ಶೆಟ್ಟಿ ಕಾವು, ಶರತ್ ಶೆಟ್ಟಿ ಮುಂಡ್ಕೂರು, ಶ್ರೀಶ ಸರಾಫ್ ಐಕಳ, ಜಗದೀಶ್ ಶೆಟ್ಟಿ ಇರಾ, ಸ್ವರಾಜ್ ಶೆಟ್ಟಿ ಮುಂಡ್ಕೂರು, ಹರ್ಷರಾಜ್ ಶೆಟ್ಟಿ ಮೂಲ್ಕಿ, ಸಾಯಿನಾಥ್ ಶೆಟ್ಟಿ ಮುಂಡ್ಕೂರು, ರತ್ನಾಕರ ಅಡಪ ಮತ್ತಿತರರು ಉಪಸ್ಥಿತರಿದ್ದರು.