ಕಾಪು ಮಾರಿಗುಡಿ ಬ್ರಹ್ಮಕಲಶೋತ್ಸವ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

| Published : Nov 18 2024, 12:07 AM IST

ಸಾರಾಂಶ

ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ ಪ್ರತಿಷ್ಠಾ - ಬ್ರಹ್ಮಕಲಶೋತ್ಸವಕ್ಕೆ ಪೂರ್ವಬಾವಿಯಾಗಿ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ ಪ್ರತಿಷ್ಠಾ - ಬ್ರಹ್ಮಕಲಶೋತ್ಸವಕ್ಕೆ ಪೂರ್ವಬಾವಿಯಾಗಿ ಬೆಂಗಳೂರಿನ ಎಂ.ಆರ್.ಜಿ. ಗ್ರೂಪ್‌ನ ಆಡಳಿತ ನಿರ್ದೇಶಕ ಡಾ. ಕೆ. ಪ್ರಕಾಶ್ ಶೆಟ್ಟಿ ಇವರ ನೇತೃತ್ವದಲ್ಲಿ ಹಾಗೂ ಮಾಣಿಲ ಮೋಹನ್ ದಾಸ್ ಪರಮಹಂಸ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪ ಕಾರ್ಯಕ್ರಮ ಭಾನುವಾರ ನಡೆಯಿತು.

ಈ ಸಂದರ್ಭ ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ದಿವಾಕರ್ ಶೆಟ್ಟಿ, ಮನೋಹರ್ ಶೆಟ್ಟಿ, ಸ್ವರ್ಣ ಸಮರ್ಪಣಾ ಸಮಿತಿ ಅಧ್ಯಕ್ಷ ರವಿ ಸುಂದರ್ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ರಘುಪತಿ ಭಟ್, ಆರ್ಥಿಕ ಸಮಿತಿ ಮುಖ್ಯ ಸಂಚಾಲಕ ಉದಯ್ ಸುಂದರ್ ಶೆಟ್ಟಿ, ಲೇಖನ ಯಜ್ಞ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗಿಶ್ ವಿ. ಶೆಟ್ಟಿ ಬಾಲಾಜಿ, ಬೆಂಗಳೂರು ಸಮಿತಿ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಸುಗ್ಗಿ ಸುಧಾಕರ್ ಶೆಟ್ಟಿ, ಮತ್ತು ವಿವಿಧ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.