ಸಾರಾಂಶ
ಧಾರ್ಮಿಕ ಕಾರ್ಯಕ್ರಮವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮತ್ತು ಬಂಟ್ವಾಳದ ಮಾಣಿಲಾ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉದ್ಘಾಟಿಸಿದರು. ಕಾಪು ಶಾಸಕ ಸುರೇಶ್ ಶೆಟ್ಟಿ, ಸಭಾಧ್ಯಕ್ಷತೆ ವಹಿಸಿಕೊಂಡಿದ್ದರು,
ಕನ್ನಡಪ್ರಭ ವಾರ್ತೆ ಕಾಪು
ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ನವದುರ್ಗಾ ಲೇಖನ ಯಜ್ಞವು ಯಶಸ್ವಿಯಾಗಿದ್ದು, ಈ ಪ್ರಯುಕ್ತ ಮಂಗಳವಾರ ನವಚಂಡಿಯಾಗ ಹಮ್ಮಿಕೊಂಡಿದ್ದು ಭಕ್ತಿಪೂರ್ವಕವಾಗಿ ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕುಮಾರಗುರು ತಂತ್ರಿ ಹಾಗೂ ಶ್ರೀನಿವಾಸ ತಂತ್ರಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.ಈ ಧಾರ್ಮಿಕ ಕಾರ್ಯಕ್ರಮವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮತ್ತು ಬಂಟ್ವಾಳದ ಮಾಣಿಲಾ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉದ್ಘಾಟಿಸಿದರು.
ಕಾಪು ಶಾಸಕ ಸುರೇಶ್ ಶೆಟ್ಟಿ, ಸಭಾಧ್ಯಕ್ಷತೆ ವಹಿಸಿಕೊಂಡಿದ್ದರು, ಮುಖ್ಯ ಅತಿಥಿಗಳಾಗಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ.ಆರ್.ಜಿ. ಗ್ರೂಪ್‌ನ ಬಂಜಾರ ಪ್ರಕಾಶ್ ಶೆಟ್ಟಿ, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ್ ಶೆಟ್ಟಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಲಾಲಾಜಿ ಮೆಂಡನ್, ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷ ಉಡುಪಿ ಮಾಜಿ ಶಾಸಕ ರಘುಪತಿ ಭಟ್, ಕಾಪು ತಹಸೀಲ್ದಾರ್ ಡಾ.ಪ್ರತಿಭಾ, ದೇವಳದ ಅಭಿವೃದ್ಧಿ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.