ಕಾಪು: ಮದ್ರಾಸ್ ಐಐಟಿಯ ಆನ್ ಲೈನ್‌ ವ್ಯಾಸಂಗಕ್ಕೆ ಚಾಲನೆ

| Published : Aug 16 2024, 12:52 AM IST

ಕಾಪು: ಮದ್ರಾಸ್ ಐಐಟಿಯ ಆನ್ ಲೈನ್‌ ವ್ಯಾಸಂಗಕ್ಕೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಜಿಲ್ಲೆಯ 20 ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರಾಯೋಗಿಕ ಐ.ಐ.ಟಿ - ಮದ್ರಾಸ್ ಇವರಿಂದ ಆನ್ ಲೈನ್ ವ್ಯಾಸಂಗ ಹಾಗೂ ಸಮಾಲೋಚನೆ ಕೋರ್ಸ್‌ಗಳ ಉದ್ಘಾಟನೆ ಸಮಾರಂಭ ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಕಾಪು

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ವತಿಯಿಂದ ಉಡುಪಿ ಜಿಲ್ಲೆಯ 20 ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರಾಯೋಗಿಕ ಐ.ಐ.ಟಿ - ಮದ್ರಾಸ್ ಇವರಿಂದ ಆನ್ ಲೈನ್ ವ್ಯಾಸಂಗ ಹಾಗೂ ಸಮಾಲೋಚನೆ ಕೋರ್ಸ್‌ಗಳ ಉದ್ಘಾಟನೆ ಸಮಾರಂಭ ಗುರುವಾರ ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ ನಡೆಯಿತು.ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಐ.ಐ.ಟಿ - ಮದ್ರಾಸ್ ಇವರಿಂದ ನೀಡುವ ಆನ್ ಲೈನ್ ವ್ಯಾಸಂಗ ಹಾಗೂ ಸಮಾಲೋಚನೆ ಕೋರ್ಸ್‌ಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಎಚ್‌.ಎಸ್. ಶೆಟ್ಟಿ, ಐ.ಐ.ಟಿ ಮದ್ರಾಸ್ ಪ್ರವರ್ತಕ ಟೆಕ್ನಾಲಜಿ ಚನ್ನೈ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಂ.ಜೆ. ಶಂಕರಮಣ, ಪಿ.ಎಸ್. ಪ್ರಕಾಶ್, ಶಾಲಾ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಕೆ. ಗಣಪತಿ, ಉಡುಪಿ ಜಿಲ್ಲಾ ಪದವಿ ಪೂರ್ವ ವಿಭಾಗದ ಉಪ ನಿರ್ದೇಶಕ ಮಾರುತಿ, ಐ.ಐ.ಟಿ ಮದ್ರಾಸ್ ಮುಖ್ಯ ನಿರ್ವಹಣಾಧಿಕಾರಿ ಜಿ. ವೀರರಾಘವನ್ ಉಪಸ್ಥಿತರಿದ್ದರು.