ಕಾಪು: ಮಂಗಳಮುಖಿಯರೊಂದಿಗೆ ರಕ್ಷಾ ಬಂಧನ

| Published : Aug 21 2024, 12:35 AM IST

ಸಾರಾಂಶ

ಬಡಗಬೆಟ್ಟು ಗ್ರಾಮದ ಶಾಂತಿನಗರದ ಶ್ರೀ ಗಣೇಶ ಸಭಾಭವನದಲ್ಲಿ ಮಂಗಳಮುಖಿಯರೊಂದಿಗೆ ‘ರಕ್ಷಾ ಬಂಧನ’ ಕಾರ್ಯಕ್ರಮ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಕಾಪು

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಸೋಮವಾರ 80ನೇ ಬಡಗಬೆಟ್ಟು ಗ್ರಾಮದ ಶಾಂತಿನಗರದ ಶ್ರೀ ಗಣೇಶ ಸಭಾಭವನದಲ್ಲಿ ಮಂಗಳಮುಖಿಯರೊಂದಿಗೆ ‘ರಕ್ಷಾ ಬಂಧನ’ ಕಾರ್ಯಕ್ರಮ ಆಯೋಜಿಸಲಾಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು.ಈ ಸಂದರ್ಭ ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸಂತೋಷ್ ಕುಮಾರ್, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷ ಸಂದೀಪ್ ಶೆಟ್ಟಿ, 80ನೇ ಬಡಗಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ ಕೋಟ್ಯಾನ್, ಸದಸ್ಯ ಸುನೀತಾ ಶೆಟ್ಟಿಗಾರ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯ ಶ್ಯಾಮಲ ಕುಂದರ್, ರಾಜ್ಯ ಬಿಜೆಪಿ ಮಾಜಿ ಉಪಾಧ್ಯಕ್ಷ ನಯನಾ ಗಣೇಶ್, ಹಿಂದುಳಿದ ವರ್ಗಗಳ ಮೋರ್ಚಾ ಕಾಪು ಮಂಡಲ ಉಸ್ತುವಾರಿ ರಾಜೇಂದ್ರ ಪಂದುಬೆಟ್ಟು, ಕಾಪು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರವಿ ಕೋಟ್ಯಾನ್, ಆಶ್ರಯ ಸಮುದಾಯ ಸಂಘದ ಕೋಶಾಧಿಕಾರಿ ಲಾವಣ್ಯ ಉಪಸ್ಥಿತರಿದ್ದರು.