ಸಾರಾಂಶ
ಕಾಪು: ಕಾಪು ತಾಲೂಕು ೭ನೇ ಕನ್ನಡ ಸಾಹಿತ್ಯ ಸಮ್ಮೇಳನ ನ. ೧೫ರಂದು ಹೆಜಮಾಡಿ ಬಿಲ್ಲವರ ಸಂಘದ ಸಭಾಭವನದಲ್ಲಿ ನಡೆಯಲಿದ್ದು, ಖ್ಯಾತ ಸಾಹಿತಿ ಫಕೀರ್ ಮುಹಮ್ಮದ್ ಕಟ್ಪಾಡಿ ಸರ್ವಾಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.ಸಾಮಾಜಿಕ ಕಳಕಳಿಯ ಸಾಕ್ಷಿಪ್ರಜ್ಞೆಯಾಗಿರುವ ಸಾಹಿತಿ ಫಕೀರ್ ಮುಹಮ್ಮದ್ ಕಟ್ಪಾಡಿ ಅವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಧಿಕಾರಿಯಾಗಿ ನಿವೃತ್ತರಾಗಿ, ಪ್ರಸ್ತುತ ಕಟ್ಪಾಡಿಯಲ್ಲಿ ವಾಸ್ತವ್ಯ ಹೊಂದಿದ್ದಾರೆ.ಗೋರಿ ಕಟ್ಟಿಕೊಂಡವರು, ನೋಂಬು, ದಜ್ಜಾಲ, ಅತ್ತರ್ ಹಾಜಿಕಾ ಮತ್ತು ಇತರ ಕಥೆಗಳು, ಪಚ್ಚಕುದುರೆ, ಕಡವು ಮನೆ, ಕುಂದಾಪ್ರ ಅವರ ಪ್ರಮುಖ ಕಥಾಸಂಕಲನಗಳು. ಸರಕುಗಳು, ಕಚ್ಚಾದ ಅವರ ಪ್ರಸಿದ್ಧ ಕಾದಂಬರಿಗಳಾಗಿವೆ. ಕೇರಳದಲ್ಲಿ ಹದಿನೈದು ದಿನಗಳು, ರಾಷ್ಟ್ರೀಯತೆ ಮತ್ತು ಮುಸ್ಲಿಮರು, ಕೈಯೂರಿನ ರೈತವೀರರು, ಸೂಫಿ ಸಂತರು, ಸೂಫಿ ಮಹಿಳೆಯರು, ಕೋಮು ಹಿಂಸೆ ನಿಯಂತ್ರಣಾ ಮಸೂದೆ, ಸೂಫಿ ಅಧ್ಯಾತ್ಮ ದರ್ಶನ ಸಹಿತ ಇನ್ನಿತರೆ ಮಹತ್ತ್ವದ ಕೃತಿಗಳನ್ನು ಅವರು ರಚಿಸಿದ್ದಾರೆ.ಅವರ ಕೃತಿಗಳು ಹಿಂದಿ, ಗುಜರಾತಿ, ಮರಾಠಿ, ತಮಿಳು, ಬಂಗಾಳಿ, ಮಲಯಾಳ, ಇಂಗ್ಲಿಷ್ ಭಾಷೆಗೆ ತರ್ಜುಮೆಗೊಂಡಿವೆ.ಕರ್ನಾಟಕ ಸಾಹಿತ್ಯ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ವಿಭಾಗದ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ೨೦೦೭ರಲ್ಲಿ ಚಿಕ್ಕಮಗಳೂರಿನಲ್ಲಿ ಜರಗಿದ ಅಖಿಲ ಭಾರತ ಬ್ಯಾರಿಭಾಷಾ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು.
ರಾಷ್ಟ್ರೀಯ ಕಥಾ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕಾರಗಳು, ಅನುವಾದ ಪ್ರಶಸ್ತಿ,ಸಾಹಿತ್ಯಶ್ರೀ ಪ್ರಶಸ್ತಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ, ತುಳುಶ್ರೀ ಪ್ರಶಸ್ತಿ, ಲಂಕೇಶ್ ಪ್ರಶಸ್ತಿ, ಆಳ್ವಾಸ್ ವಿಶ್ವ ನುಡಿಸಿರಿ ಪ್ರಶಸ್ತಿ, ಸದ್ಭಾವನಾ ಪ್ರಶಸ್ತ, ಡಾ. ಎಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಗಳು ಅವರಿಗೆ ಸಂದಿವೆ.;Resize=(128,128))
;Resize=(128,128))
;Resize=(128,128))
;Resize=(128,128))