ಕಾಪು: ವಿಕಸಿತ ಭಾರತ ಸಂಕಲ್ಪ ಯಾತ್ರೆ ಸಮಾರೋಪ

| Published : Jan 26 2024, 01:45 AM IST

ಸಾರಾಂಶ

ಕಾಪು ಶಾಸಕ ಸುರೇಶ್ ಶೆಟ್ಟಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಉದ್ಘಾಟಿಸಿ, ಮುದ್ರಾ ಯೋಜನೆ ಅಡಿಯಲ್ಲಿ ಮಂಜೂರಾದ ಸಾಲ ಸೌಲಭ್ಯದ ಆದೇಶ ಪತ್ರವನ್ನು ಹಾಗೂ ಆಯುಷ್ಮಾನ್ ಕಾರ್ಡ್ ಮತ್ತು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಮಂಜೂರಾದ ಉಚಿತ ಗ್ಯಾಸ್ ಸಂಪರ್ಕಗಳನ್ನು ಫಲಾನುಭವಿಗಳಿಗೆ ವಿತರಿಸಿದರು.

ಕನ್ನಡಪ್ರಭ ವಾರ್ತೆ ಕಾಪು

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನ. 15 ರಿಂದ ಜನವರಿ 25ರವರೆಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ಗುರುವಾರ ಎಲ್ಲೂರೂ ಗ್ರಾಮ ಪಂಚಾಯತ್ ಬಳಿ ನಡೆಯಿತು.

ಕಾಪು ಶಾಸಕ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಸಭಾ ಕಾರ್ಯಕ್ರಮನ್ನು ಉದ್ಘಾಟಿಸಿ ಬಳಿಕ ಮುದ್ರಾ ಯೋಜನೆ ಅಡಿಯಲ್ಲಿ ಮಂಜೂರಾದ ಸಾಲ ಸೌಲಭ್ಯದ ಆದೇಶ ಪತ್ರವನ್ನು ಹಾಗೂ ಆಯುಷ್ಮಾನ್ ಕಾರ್ಡ್ ಮತ್ತು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಮಂಜೂರಾದ ಉಚಿತ ಗ್ಯಾಸ್ ಸಂಪರ್ಕಗಳನ್ನು ಫಲಾನುಭವಿಗಳಿಗೆ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ವಿಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಎಲ್ಲೂರು ಗ್ರಾಪಂ ಅಧ್ಯಕ್ಷ ರವಿರಾಜ್ ರಾವ್, ಉಪಾಧ್ಯಕ್ಷೆ ಉಷಾ, ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಜಿಲ್ಲಾ ಪ್ರಭಾರಿಗಳಾದ ಶೊಯ್ಯಬ್ ಅಹಮ್ಮದ್ ಕಲಾಲ್, ನಬಾರ್ಡ್ ನ ಸಂಗೀತಾ ಕರ್ತ, ಲೀಡ್ ಬ್ಯಾಂಕ್ ಪ್ರಬಂಧಕ ಬೀರ್ ಸಾಬ್ ಪಿಂಜಾರ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ವಿಕಸಿತ ಭಾರತ ಸಂಕಲ್ಪ ಯಾತ್ರೆಯ ನೋಡಲ್ ಅಧಿಕಾರಿ ಸಚಿನ್, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಡಾ. ಧನಂಜಯ್, ಕೃಷಿ ಇಲಾಖೆಯ ವೆಂಕಟೇಶ್, ರುಡ್ ಸೆಟ್ ಸಂಸ್ಥೆಯ ಕರುಣಾಕರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಎಲ್ಲೂರು ಗ್ರಾ.ಪಂ. ಸರ್ವ ಸದಸ್ಯರು ಉಪಸ್ಥಿತರಿದ್ದರು.