ಕಾಪು: ಬಿಜೆಪಿ ಮಹಿಳಾ ಮೋರ್ಚದಿಂದ ಮಹಿಳಾ ಕಾರ್ಯಾಗಾರ

| Published : Apr 09 2024, 12:56 AM IST

ಕಾಪು: ಬಿಜೆಪಿ ಮಹಿಳಾ ಮೋರ್ಚದಿಂದ ಮಹಿಳಾ ಕಾರ್ಯಾಗಾರ
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬಿಜೆಪಿ ರಾಜ್ಯ ಪರಿಣಿತ ಪ್ರಶಿಕ್ಷಕರಾದ ಡಾ. ಶಿಕಾರಿಪುರ ಕೃಷ್ಣಮೂರ್ತಿ, ಸಾಮಾಜಿಕ ಕಾರ್ಯಕರ್ತರಾದ ಡಾ. ಲತಾ ಭಾಗವಹಿಸಿ ಕಾರ್ಯಗಾರ ನಡೆಸಿಕೊಟ್ಟರು.

ಕನ್ನಡಪ್ರಭ ವಾರ್ತೆ ಕಾಪು

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಪು ಮಂಡಲದ ಬಿಜೆಪಿ ಮಹಿಳಾ ಮೋರ್ಚದ ವತಿಯಿಂದ ಮಹಿಳಾ ಕಾರ್ಯಾಗಾರವು ಸೋಮವಾರ ಕಾಪು ಬಿಜೆಪಿ ಮಂಡಲ ಕಚೇರಿಯಲ್ಲಿ ನಡೆಯಿತು. ಈ ಕಾರ್ಯಾಗಾರವನ್ನು ಮಂಡಲದ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭ ಲೋಕಸಭಾ ಚುನಾವಣಾ ಉಸ್ತುವಾರಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಮಹಿಳಾ ಮೊರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ರಾಜ್ಯ ಮಹಿಳಾ ಮೊರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಶ್ಮಾ ಉದಯ್ ಶೆಟ್ಟಿ, ನಿಕಟಪೂರ್ವ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಹಾಗೂ ಮಹಿಳಾ ಕಾರ್ಯಾಗಾರದ ಉಸ್ತುವಾರಿ ನಯನ ಗಣೇಶ್, ನಿಕಟಪೂರ್ವ ಜಿಲ್ಲಾ ಮಹಿಳಾ ಮೊರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಮಹಿಳಾ ಮೊರ್ಚಾ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಪವಿತ್ರ ಶೆಟ್ಟಿ, ಸಂಧ್ಯಾ ಕಾಮತ್, ಮಹಿಳಾ ಮೊರ್ಚಾ ಪದಾಧಿಕಾರಿಗಳು, ಸದಸ್ಯರು, ಪಂಚಾಯಿತಿ/ಪುರಸಭೆ ಸದಸ್ಯರು ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾಪು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬಿಜೆಪಿ ರಾಜ್ಯ ಪರಿಣಿತ ಪ್ರಶಿಕ್ಷಕರಾದ ಡಾ. ಶಿಕಾರಿಪುರ ಕೃಷ್ಣಮೂರ್ತಿ, ಸಾಮಾಜಿಕ ಕಾರ್ಯಕರ್ತರಾದ ಡಾ. ಲತಾ ಭಾಗವಹಿಸಿ ಕಾರ್ಯಗಾರ ನಡೆಸಿಕೊಟ್ಟರು. ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಪ್ರಭಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.