ಸಾರಾಂಶ
ರಾಮನಗರ: ನಗರದ ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವದ ಹಿನ್ನೆಲೆಯಲ್ಲಿ ಕೈಗೊಳ್ಳ ಬೇಕಾದ ಸಿದ್ಧತಾ ಕಾರ್ಯಗಳ ಕುರಿತು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಪಾಷಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ರಾಮನಗರ: ನಗರದ ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವದ ಹಿನ್ನೆಲೆಯಲ್ಲಿ ಕೈಗೊಳ್ಳ ಬೇಕಾದ ಸಿದ್ಧತಾ ಕಾರ್ಯಗಳ ಕುರಿತು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಪಾಷಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಸ್ಥಾಯಿ ಸಮಿತಿ ಅಧ್ಯಕ್ಷರ ಕೊಠಡಿಯಲ್ಲಿ ಆರೋಗ್ಯ, ಕಂದಾಯ ಶಾಖೆ, ಜಲಮಂಡಳಿ ಅಧಿಕಾರಿಗಳು ಹಾಗೂ ಪೌರ ಕಾರ್ಮಿಕರ ಸಭೆ ನಡೆಸಿದ ಫೈರೋಜ್ ಪಾಷರವರು ಕರಗ ಮಹೋತ್ಸವದ ಸಂದರ್ಭದಲ್ಲಿ ಸ್ವಚ್ಛತೆ ಹಾಗೂ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ನಿಗಾ ವಹಿಸಬೇಕು ಎಂದು ಸೂಚಿಸಿದರು.ಶ್ರೀ ಚಾಮುಂಡೇಶ್ವರಿ ಕರಗ ಮಹೋತ್ಸವ ಭಾವೈಕ್ಯತೆ ಸಾರುವ ಹಬ್ಬವಾಗಿದೆ. ಬೇರೆ ಬೇರೆ ಜಿಲ್ಲೆಗಳಿಂದ ಲಕ್ಷಾಂತರ ಜನರು ನಗರಕ್ಕೆ ಆಗಮಿಸುತ್ತಾರೆ. ಹೀಗಾಗಿ ನಗರದಲ್ಲಿ ಸ್ವಚ್ಛತೆ ಕಾಪಾಡಬೇಕಾಗಿರುವುದು ಸವಾಲಿನ ಪ್ರಶ್ನೆಯಾಗಿದೆ. ಆದ್ದರಿಂದ ಪೌರ ಕಾರ್ಮಿಕರು ರಸ್ತೆ ಬದಿ ಹಾಗೂ ಪ್ರಮುಖ ವೃತ್ತಗಳಲ್ಲಿ ಕಸ ಸಂಗ್ರಹವಾಗದಂತೆ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ತಿಳಿಸಿದರು.
ಅಲ್ಲದೆ, ನಗರದಲ್ಲಿ 9 ಕರಗಗಳು ಸಾಗುತ್ತವೆ. ಈ ಎಲ್ಲ ಕರಗಗಳು ಸಾಗುವ ಬೀದಿಗಳಲ್ಲಿ ಸ್ವಚ್ಚತೆ ಕಾಪಾಡಬೇಕು. ಜೊತೆಗೆ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದರೆ ಅದನ್ನು ಮುಚ್ಚುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಹಬ್ಬದ ಕಾರಣ ನೆಂಟರಿಷ್ಟರು ಮನೆಗಳಿಗೆ ಬರುವುದು ವಾಡಿಕೆಯಾಗಿದೆ. ಯಾವ ವಾರ್ಡಿನಲ್ಲಿಯೂ ನೀರಿಗೆ ತೊಂದರೆ ಯಾಗದಂತೆ ಗಮನ ಹರಿಸಬೇಕು ಎಂದು ಫೈರೋಜ್ ಪಾಷ ಹೇಳಿದರು.
ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಆಯಿಷಾ ಬಾನು ಮತ್ತಿತರರು ಉಪಸ್ಥಿತರಿದ್ದರು.4ಕೆಆರ್ ಎಂಎನ್ 3.ಜೆಪಿಜಿ
ರಾಮನಗರ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಪಾಷರವರು ಅಧಿಕಾರಿಗಳು ಮತ್ತು ಪೌರಕಾರ್ಮಿಕರೊಂದಿಗೆ ಸಮಾಲೋಚನೆ ನಡೆಸಿದರು.