ಸಾರಾಂಶ
ಇಂದು ಕನ್ನಡ ರಾಜ್ಯೋತ್ಸವ ಎಲ್ಲಾ ಕಡೆ ಆಚರಿಸಲಾಗುತ್ತಿದೆ. ಆದರೆ, ಕನ್ನಡ ಶಾಲೆಗಳಿಗೆ ಅನುದಾನ ನೀಡಲು ಕ್ರಮವನ್ನು ತೆಗೆದುಕೊಂಡಿಲ್ಲ. 1995 ರಿಂದ ಇಲ್ಲಿಯವರೆಗೆ ಕನ್ನಡ ಶಾಲೆಗಳಿಗೆ ಗಳಿಗೆ ಅನುದಾನವನ್ನು ನೀಡುತ್ತಿಲ್ಲ. ಇದರಿಂದ ರಾಜ್ಯದಾದ್ಯಂತ ನಡೆಯುತ್ತಿರುವ ಕನ್ನಡ ಶಾಲೆಗಳು ಮತ್ತು ಶಿಕ್ಷಕರು ತೊಂದರೆಗೆ ಒಳಗಾಗಿದ್ದಾರೆ ಎಂದು ಅಳಲು ತೋಡಿಕೊಂಡರು.
ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ಅನುದಾನ ರಹಿತ ಶಾಲೆಗಳ ಶಿಕ್ಷಕರು ಶುಕ್ರವಾರ ಕಪ್ಪುಪಟ್ಟಿ ಧರಿಸಿ ಕರಾಳ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು.ಇಂದು ಕನ್ನಡ ರಾಜ್ಯೋತ್ಸವ ಎಲ್ಲಾ ಕಡೆ ಆಚರಿಸಲಾಗುತ್ತಿದೆ. ಆದರೆ, ಕನ್ನಡ ಶಾಲೆಗಳಿಗೆ ಅನುದಾನ ನೀಡಲು ಕ್ರಮವನ್ನು ತೆಗೆದುಕೊಂಡಿಲ್ಲ. 1995 ರಿಂದ ಇಲ್ಲಿಯವರೆಗೆ ಕನ್ನಡ ಶಾಲೆಗಳಿಗೆ ಗಳಿಗೆ ಅನುದಾನವನ್ನು ನೀಡುತ್ತಿಲ್ಲ. ಇದರಿಂದ ರಾಜ್ಯದಾದ್ಯಂತ ನಡೆಯುತ್ತಿರುವ ಕನ್ನಡ ಶಾಲೆಗಳು ಮತ್ತು ಶಿಕ್ಷಕರು ತೊಂದರೆಗೆ ಒಳಗಾಗಿದ್ದಾರೆ ಎಂದು ಅಳಲು ತೋಡಿಕೊಂಡರು.
ಶಿಕ್ಷಕರ ಸಮಸ್ಯೆ ಬಗೆಹರಿಸಲು ಕನ್ನಡ ಶಾಲೆಗಳಿಗೆ ಅನುದಾನ ನೀಡಬೇಕು. ಈ ಬಗ್ಗೆ ಹಲವು ಹೋರಾಟ ಮಾಡಲಾಗುತ್ತಿದೆ. ಆದರೂ ಸರ್ಕಾರ ಯಾವುದೇ ಸಂದೇಶ ನೀಡಿಲ್ಲ ಎಂದು ದೂರಿದರು.ಮತ್ತೊಂದೆಡೆ ಸರ್ಕಾರವೇ ಕನ್ನಡ ಶಾಲೆಗಳಿಗೆ ಬದಲಾಗಿ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯುತ್ತಿದೆ. ಉಳಿದಿರುವ ಕನ್ನಡ ಶಾಲೆಗಳಿಗೆ ಮುಚ್ಚುವ ಮುನ್ನ ಕನ್ನಡ ಶಾಲೆ ಗಳು ಉಳಿಸಿ ಕನ್ನಡ ಭಾಷೆ ಉಳಿಯಲು ಮುಂದಾಗಬೇಕು ಎಂದು ಪ್ರತಿಭಟನಾಕಾರು ತಿಳಿಸಿದರು.
ಸರ್ಕಾರ ಕೂಡಲೇ ಗಮನಹರಿಸಿ ಅನುದಾನ ರಹಿತ ಕನ್ನಡ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕೆಂದು ಮನವಿ ಮಾಡಿತು. ಪ್ರತಿಭಟನೆಯಲ್ಲಿ ಕನ್ನಡ ಸೇನೆ ಅಧ್ಯಕ್ಷ ಮಂಜುನಾಥ್, ರಾಜ್ಯ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಕಾಳೇಗೌಡ ಅನುದಾನ ರಹಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ಪ, ಶಿಕ್ಷಕರಾದ ಸುರೇಶ್, ಕೃಷ್ಣಪ್ಪ, ಶಿವಕುಮಾರ್, ವೀಣಾ, ಭಾರತಿ, ಸುಶೀಲಮ್ಮ, ರತ್ನಮ್ಮ, ರಮ್ಯಾ, ಪ್ರಶಾಂತ್ ಇನ್ನು ಹಲವಾರು ಶಿಕ್ಷಕರು ಹಾಜರಿದ್ದರು.