ಕಾರಂತರ ಸಾಹಿತ್ಯಕ್ಕೆ ಪ್ರತ್ಯೇಕ ಸ್ಥಾನವಿದೆ: ಡಾ. ವಸಂತಕುಮಾರ್

| Published : Oct 11 2025, 12:03 AM IST

ಸಾರಾಂಶ

ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗ, ಸಾಹಿತ್ಯ ಸಂಘ, ಐಕ್ಯೂಎಸಿ ಸಹಯೋಗದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನಾಚರಣೆ ಅಂಗವಾಗಿ ಡಾ. ಕಾರಂತ ಕೃತಿಗಳ ಅನನ್ಯತೆ ಎನ್ನುವ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಉಡುಪಿ

ನಗರದ ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗ, ಸಾಹಿತ್ಯ ಸಂಘ, ಐಕ್ಯೂಎಸಿ ಸಹಯೋಗದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನಾಚರಣೆ ಅಂಗವಾಗಿ ಡಾ. ಕಾರಂತ ಕೃತಿಗಳ ಅನನ್ಯತೆ ಎನ್ನುವ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.ಉಪನ್ಯಾಸ ನೀಡಿದ ನಿವೃತ್ತ ಪ್ರಾಧ್ಯಪಕ ಡಾ. ವಸಂತ ಕುಮಾರ್, ಡಾ. ಕಾರಂತರ ಸಾಹಿತ್ಯ ಕಡಲಂತೆ, ಅವರ ಕೃತಿಗಳಲ್ಲಿ ಕಾಲ್ಪನಿಕತೆಗೆ ಹೆಚ್ಚು ಪ್ರಾಧಾನ್ಯತೆ ಇಲ್ಲ. ಅವರು ವಾಸ್ತವ ಬದುಕಿನ ಚಿತ್ರಣವನ್ನು ಅತ್ಯಂತ ಪರಿಣಾಮಕಾರಿಯಾಗಿ ರಚಿಸಿದವರು. ಅಲ್ಲಿ ಬರುವ ಪಾತ್ರಗಳು ಕಟ್ಟುವ ಸನ್ನಿವೇಶಗಳು ನಡೆಯುವ ಘಟನೆಗಳು ನಮ್ಮ ನಿಮ್ಮ ನಡುವಿನ ಸಂಗತಿಗಳಾಗಿರುತ್ತವೆ. ಅವರ ಬರಹದ ವಸ್ತು ವಿನ್ಯಾಸ, ನಿರೂಪಣಾ ಶೈಲಿ, ವಿವರಣಾ ತಂತ್ರಗಳಲ್ಲಿ ಅನನ್ಯತೆ ಇದೆ. ಹಾಗಾಗಿ ಅವರ ರಚನೆಗಳು ಕನ್ನಡ ಸಾಹಿತ್ಯದಲ್ಲಿ ಲೋಕದಲ್ಲಿ ಪ್ರತ್ಯೇಕವಾದ ಸ್ಥಾನವನ್ನು ಪಡೆದಿವೆ ಎಂದರು.ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಡಾ. ಎಂ. ವಿಶ್ವನಾಥ ಪೈ, ಕಾಲೇಜಿನ ಐಕ್ಯೂಎಸಿ ಸಂಯೋಜನಾಧಿಕಾರಿ ಪ್ರೊ.ಶೈಲಜಾ ಎಚ್. ಪ್ರಾಧ್ಯಾಪಕರಾದ ರಾಘವೇಂದ್ರ ತುಂಗ ಕೆ., ಡಾ. ಕಾತ್ಯಾಯಿನಿ ಕುಂಜಿಬೆಟ್ಟು, ಪ್ರೊ.ಅಂಬಿಕಾ, ಪ್ರೊ.ಜಯಂತಿ, ಪ್ರೊ.ಪ್ರಿಯಶ್ರೀ, ಗಾಂಧಿ ಅಧ್ಯಯನ ಕೇಂದ್ರದ ಸಂಯೋಜನಾಧಿಕಾರಿ ವಿನಿತ್ ರಾವ್ ಉಪಸ್ಥಿತರಿದ್ದರು.ಕನ್ನಡ ವಿಭಾಗದ ಮುಖ್ಯಸ್ಥ ಡಾ. ಪುತ್ತಿ ವಸಂತ ಕುಮಾರ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಸಾಹಿತ್ಯ ಸಂಘದ ಕಾರ್ಯದರ್ಶಿ ನವಿತಾ ವಂದಿಸಿದರು. ವಿದ್ಯಾರ್ಥಿನಿ ತ್ರಿವೇಣಿ ನಿರೂಪಿಸಿದರು.