ಆಡಂಬರದ ಬದುಕನ್ನು ಇಷ್ಟಪಡದ ಶಿವರಾಮ ಕಾರಂತರು ನೇರ ನಡೆನುಡಿಯ ವ್ಯಕ್ತಿಯಾಗಿದ್ದರು. ಯಕ್ಷಗಾನದ ಕುರಿತು ಆಸಕ್ತಿಯನ್ನು ಹೊಂದಿದ ಅವರು ಯಕ್ಷಗಾನದ ಉಳಿವಿಗಾಗಿ ಮಹತ್ವವಾದ ಕೊಡುಗೆಯನ್ನು ನೀಡಿದ್ದಾರೆ. ಕಾರಂತರಂತಹ ಸಾಹಿತಿಯನ್ನು ಪಡೆದಿರುವುದು ನಾಡಿಗೆ ಹೆಮ್ಮೆ ಎಂದು ಜಾನಪದ ವಿದ್ವಾಂಸ ಮತ್ತು ನಿವೃತ್ತ ಪ್ರಾಂಶುಪಾಲ ಪ್ರೊ.ಕನರಾಡಿ ವಾದಿರಾಜ ಭಟ್ ಹೇಳಿದರು.
ಬೈಂದೂರು : ಆಡಂಬರದ ಬದುಕನ್ನು ಇಷ್ಟಪಡದ ಶಿವರಾಮ ಕಾರಂತರು ನೇರ ನಡೆನುಡಿಯ ವ್ಯಕ್ತಿಯಾಗಿದ್ದರು. ಯಕ್ಷಗಾನದ ಕುರಿತು ಆಸಕ್ತಿಯನ್ನು ಹೊಂದಿದ ಅವರು ಯಕ್ಷಗಾನದ ಉಳಿವಿಗಾಗಿ ಮಹತ್ವವಾದ ಕೊಡುಗೆಯನ್ನು ನೀಡಿದ್ದಾರೆ. ಕಾರಂತರಂತಹ ಸಾಹಿತಿಯನ್ನು ಪಡೆದಿರುವುದು ನಾಡಿಗೆ ಹೆಮ್ಮೆ ಎಂದು ಜಾನಪದ ವಿದ್ವಾಂಸ ಮತ್ತು ನಿವೃತ್ತ ಪ್ರಾಂಶುಪಾಲ ಪ್ರೊ.ಕನರಾಡಿ ವಾದಿರಾಜ ಭಟ್ ಹೇಳಿದರು.
ಬೈಂದೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್, ರಂಗೋಲಿ ಕಲಾ ಪರಿಷತ್ ಸಹಯೋಗದಲ್ಲಿ ನಡೆದ ಮಕ್ಕಳಿಗಾಗಿ ಕಾರಂತರು - 9 ಶಾಲಾ ವಿದ್ಯಾರ್ಥಿಗಳಿಗೆ ಕಾರಂತರ ಪರಿಚಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಕಾರಂತರು ನಮ್ಮ ನಾಡುನುಡಿಗಾಗಿ ಅನೇಕ ಕೊಡುಗೆಯನ್ನು ನೀಡಿದ್ದಾರೆ. ನಾಡಿನ ಏಳಿಗೆಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿಗಳ ಆದರ್ಶವನ್ನು ಆಳವಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು, ಮಕ್ಕಳಿಗೆ ಸೃಜನಶೀಲ ಚಟುವಟಿಕೆ ಹಾಗೂ ಕಾರಂತರ ವ್ಯಕ್ತಿತ್ವವನ್ನು ಪರಿಚಯಿಸಿ ಆ ಮೂಲಕ ಅವರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಡಾ.ಶಿವರಾಮ ಕಾರಂತ ಟ್ರಸ್ಟ್ ವಿವಿಧ ಕಾರ್ಯಕ್ರಮವನ್ನು ಯೋಜಿಸುತ್ತಿದೆ ಎಂದರು. ವಲಯ ಮಟ್ಟ ಹಾಗೂ ಶಾಲಾ ಮಟ್ಟ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ಕುಮಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕಟರಮಣ ಹೆಚ್, ಬೈಂದೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅರುಣ್ ಕುಮಾರ್ ಶಿರೂರು, ಕಾರಂತ ಟ್ರಸ್ಟಿನ ಸದಸ್ಯ ಡಾ.ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ರಂಗೋಲಿ ಕಲಾಪರಿಷತ್ತಿನ ಅಧ್ಯಕ್ಷೆ ಡಾ.ಭಾರತಿ ಮರವಂತೆ ಸ್ವಾಗತಿಸಿ, ಶಾಲೆಯ ಶಿಕ್ಷಕಿ ಶಶಿರೇಖಾ ನಿರೂಪಿಸಿ, ಮುಖ್ಯ ಶಿಕ್ಷಕ ಗಣಪತಿ ಹೋಬಳಿದಾರ್ ವಂದಿಸಿದರು.