ಸಾರಾಂಶ
ಶಿರಾ ನಗರದ ಕದಂಬ ಇಂಟರ್‌ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿಯರು ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಚಿನ್ನ ಹಾಗೂ ಕಂಚಿನ ಪದಕ ಗಳಿಸಿದ್ದಾರೆ.
ಶಿರಾ: ನಗರದ ಕದಂಬ ಇಂಟರ್‌ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿಯರು ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಚಿನ್ನ ಹಾಗೂ ಕಂಚಿನ ಪದಕ ಗಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಐಸಿಎಸ್ಇ ಕರಾಟೆ ಪಂದ್ಯಾವಳಿಯಲ್ಲಿ ನಿತ್ಯ ಸಿ.ಸಿ. ಚಿನ್ನದ ಪದಕ ಮತ್ತು ಯೋಗಿನಿ ಎ.ಎಂ. ಕಂಚಿನ ಪದಕವನ್ನು ಪಡೆದಿದ್ದಾರೆ. ಶಾಲೆಯ ನಿತ್ಯ ಸಿ.ಸಿ. ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ವಿದ್ಯಾರ್ಥಿನಿಯರಿಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುವಾಲರು, ಶಿಕ್ಷಕರು ಮತ್ತು ಶಿಕ್ಷಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.