ಕೊಪ್ಪಳ: ಇಂದಿನ ದಿನಗಳಲ್ಲಿ ಸ್ವಯಂ ರಕ್ಷಣೆಗಾಗಿ ಕರಾಟೆ ಅತೀ ಅಗತ್ಯವಾಗಿ ಎಲ್ಲರೂ ಕಲಿಯಬೇಕಾದ ಕ್ರೀಡೆಯಾಗಿದೆ. ಕರಾಟೆ ಎಲ್ಲ ಶಾಲೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಕಲಿಸುವಂತಾಗಬೇಕು ಎಂದು ಕೊಪ್ಪಳ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ ಹೇಳಿದರು.

ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಪಂ, ಕೊಪ್ಪಳ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ,ಕರಾಟೆ ಇಂಡಿಯಾ ಆರ್ಗನೈಜೇಷನ್ ಮತ್ತು ನ್ಯಾಷನಲ್ ಸ್ಟೀರಿಟ್ ಕರಾಟೆ ಅಕಾಡಮಿ ಕೊಪ್ಪಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿನಿಯರ ಕರಾಟೆ ಪ್ರದರ್ಶನ-ಬೆಲ್ಸ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಆರೋಗ್ಯಕರ ದೇಹದಲ್ಲಿ ಆರೋಗ್ಯಕರ ಮನಸ್ಸು ಇರುತ್ತದೆ ಎನ್ನುವಂತೆ ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯೂ ಸಾಧ್ಯವಾಗುತ್ತದೆ ಎಂದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ನಿಮಿತ್ತ ಈ ಕಾರ್ಯಕ್ರಮ ಆಯೋಜಿಸಿರುವುದು ನಿಜಕ್ಕೂ ಅರ್ಥಪೂರ್ಣ. ವಿವಿಧ ಶಾಲೆಯ ಮಕ್ಕಳು ಇದರಲ್ಲಿ ಭಾಗವಹಿಸಿ ಪ್ರದರ್ಶನ ಮಾಡಿ ಬೆಲ್ಟ್ ಪಡೆಯುತ್ತಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.

ಎಪಿಜೆ ಅಬ್ದುಲ್ ಕಲಾಂ ಸಿಬಿಎಸ್ಸಿ ಶಾಲೆ ಲಿಂಗದಳ್ಳಿ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಳಕಲ್ ಮತ್ತು ಹಿಟ್ನಾಳ ಶಾಲೆಯ ೨೫೦ ವಿದ್ಯಾರ್ಥಿನಿಯರು ಭಾಗವಹಿಸಿ ೨೦೨೫-೨೬ನೇ ಸಾಲಿನಲ್ಲಿ ಪಡೆದ ತರಬೇತಿಯ ಪ್ರದರ್ಶನ ಮಾಡಿದರು. ಇದೇ ಸಂದರ್ಭದಲ್ಲಿ ಬೆಲ್ಟ್ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು.

ಪ್ರಾಸ್ತಾವಿಕವಾಗಿ ನ್ಯಾಷನಲ್ ಸ್ಟೀರಿಟ್ ಕರಾಟೆ ಅಕಾಡಮಿ ಮುಖ್ಯಸ್ಥ ರಾಜಾಬಕ್ಷಿ ಎಚ್.ವಿ. ನೆರವೇರಿಸಿದರು. ಅಧ್ಯಕ್ಷತೆಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಅಜ್ಮೀರ್ ಅಲಿ ವಹಿಸಿದ್ದರು.ವೇದಿಕೆಯ ಮೇಲೆ ನ್ಯಾಷನಲ್ ಶುಟೋಕಾನ್ ಕರಾಟೆ ಅಸೋಶಿಯೇಷನ್ ಕರ್ನಾಟಕದ ಅಧ್ಯಕ್ಷ ಬಿ.ಬಾಷಾಸಾಹೇಬ, ಹಿರಿಯ ಹೋರಾಟಗಾರ ನಜೀರ್ ಮೂಲಿಮನಿ, ಮಾಜಿ ನಗರಸಭಾ ಸದಸ್ಯ ಮಾನ್ವಿ ಪಾಷಾ, ತರಬೇತುದಾರ ದೀಪಾ ಮತ್ತು ರೋಹಿಣಿ ಉಪಸ್ತಿತರಿದ್ದರು. ದಾವಲಸಾಬ ಬೆಟಗೇರಿ ನಿರೂಪಿಸಿದರು. ದೇವಪ್ಪ ಕಲ್ಲನ್ನವರ ವಂದಿಸಿದರು.