ಆತ್ಮರಕ್ಷಣೆ, ಸ್ಥೈರ್ಯ ಹೆಚ್ಚಿಸಲು ಕರಾಟೆ ಸಹಕಾರಿ: ಕರಾಟೆ ಶಿವು

| Published : Jul 25 2025, 12:30 AM IST

ಸಾರಾಂಶ

ಕರಾಟೆಯಿಂದ ಸ್ವಯಂ ರಕ್ಷಣೆ ಜತೆಗೆ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಈ ಕ್ರೀಡೆಯಿಂದ ಏಕಾಗ್ರತೆ ಹೆಚ್ಚುತ್ತದೆ. ಮಕ್ಕಳು ವಿದ್ಯಾರ್ಥಿ ದಿಸೆಯಿಂದಲೇ ಕರಾಟೆಯನ್ನು ಕಲಿಯಲು ಮುಂದಾಗಬೇಕು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಆತ್ಮ ರಕ್ಷಣೆ ಮತ್ತು ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಲು ಕರಾಟೆ ಕಲಿಕೆ ಪ್ರತಿಯೊಬ್ಬರ ಜೀವನದಲ್ಲಿ ಸಹಕಾರಿಯಾಗಲಿದೆ ಎಂದು ಜೆನ್ಸ್ ಸ್ಪೋರ್ಟ್ಸ್ ಮಾರ್ಷಲ್ ಆರ್ಟ್ಸ್ ಅಕಾಡೆಮಿಯ ಕರಾಟೆ ಶಿವು ತಿಳಿಸಿದರು.

ಪಟ್ಟಣದ ಶಾಂತಿ ಸಮುದಾಯ ಭವನದಲ್ಲಿ ಈಚೆಗೆ ಜೆನ್ಸ್ ಸ್ಪೋರ್ಟ್ಸ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಆಯೋಜಿಸಿದ 4ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರಾಟೆಯಿಂದ ಸ್ವಯಂ ರಕ್ಷಣೆ ಜತೆಗೆ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಈ ಕ್ರೀಡೆಯಿಂದ ಏಕಾಗ್ರತೆ ಹೆಚ್ಚುತ್ತದೆ. ಮಕ್ಕಳು ವಿದ್ಯಾರ್ಥಿ ದಿಸೆಯಿಂದಲೇ ಕರಾಟೆಯನ್ನು ಕಲಿಯಲು ಮುಂದಾಗಬೇಕು ಎಂದರು.

ಪಂದ್ಯಾವಳಿಗೆ ಚಾಲನೆ ನೀಡಿದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಸಿದ್ದರಾಜು ಮಾತನಾಡಿ, ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳಲು ಕರಾಟೆ ಕಲಿಯಬೇಕು. ಕರಾಟೆ ಕಲಿಕೆಯಿಂದ ಧೈರ್ಯ ಬರುತ್ತದೆ. ಪೋಷಕರು ಮಕ್ಕಳಿಗೆ ಕರಾಟೆ ಕಲಿಸಲು ಮುಂದಾಗಬೇಕು ಎಂದರು.

ಸಿಆರ್ ಪಿ ಎಫ್ ಪೊಲೀಸ್ ಕರಾಟೆ ಟೀಮ್ ಇಂಡಿಯಾ ಮಾಜಿ ಕೋಚ್ ಮಾಲತೇಶ್ ಮಾತನಡಿದರು. ಪಂದ್ಯಾವಳಿಯಲ್ಲಿ ತಮಿಳುನಾಡು, ಕೇರಳ, ಕರ್ನಾಟಕದ ಹಲವು ಜಿಲ್ಲೆಗಳಿಂದ 400ಕ್ಕೂ ಅಧಿಕ ಕರಾಟೆ ಪಟುಗಳು ಭಾಗವಹಿಸಿದ್ದರು.

ಫೈಟ್ ಓಪನ್ ಫೈಟ್ ವಿಭಾಗದಲ್ಲಿ ತಮಿಳುನಾಡಿನ ಕಾಂಚಿಪುರಂನ ಎಲಾಯಿಂಟ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಸತೀಶ್, ಮೈಸೂರಿನ ಮಾಸ್ಟರ್ ಅಶೋಕ್ ಪ್ರಧಾನ್, ಸಂಸ್ಥೆಯ ಕೆ.ಹರ್ಷಿಕಾ ಟ್ರೋಫಿ ಗೆದ್ದುಕೊಂಡರು.

ನಾಳೆ ವಿದ್ಯುತ್ ವ್ಯತ್ಯಯ

ಮಂಡ್ಯ: ತಾಲೂಕಿನ ಚಿಕ್ಕಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಪಣಕನಹಳ್ಳಿ, ಗೊರವಾಲೆ ಎನ್.ಜೆ.ವೈ ಮಾರ್ಗ ಮತ್ತು ಸಂಪಹಳ್ಳಿ ಐ.ಪಿ ಮಾರ್ಗದಲ್ಲಿ ತುರ್ತು ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಜುಲೈ 26 ರಂದು ಬೆಳಗ್ಗೆ 9 ರಿಂದ ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವುದು. ಗ್ರಾಮಾಂತರ ಪ್ರದೇಶಗಳಾದ ಸಂಪಹಳ್ಳಿ, ಗೊರವಾಲೆ, ಬಿ.ಹೊಸಹಳ್ಳಿ, ಬೀರಗೌಡನಹಳ್ಳಿ, ಶಂಭೂನಹಳ್ಳಿ, ಕೋಣನಹಳ್ಳಿ, ಪಣಕನಹಳ್ಳಿ, ಹೊಳಲು, ಎಂ. ಜಿ. ಬಡಾವಣೆ, ತಂಡಸನಹಳ್ಳಿ, ಸಿದ್ದಯ್ಯನಕೊಪ್ಪಲು, ವೈ.ಯರಹಳ್ಳಿ , ಅವ್ವೇರಹಳ್ಳಿ, ಸಂಪಹಳ್ಳಿ ಐ.ಪಿ ಮಾರ್ಗ ಹಾಗೂ ಈ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಚಾವಿಸನಿನಿ, ಕಾ ಮತ್ತು ಪಾ ವಿಭಾಗ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.