ಸಾರಾಂಶ
ಮಹಮ್ಮದ್ ರೆಯ್ಯಾನ್ ಕರಾಟೆ ಫೈಟಿಂಗ್ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು 2 ಚಿನ್ನದ ಪದಕ ಸಹಿತ ಎರಡನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಈ ಹಿಂದೆ ಹಾಸನದಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಅವರು ಸೆನ್ಸಾಯಿ ಅಬ್ದುಲ್ ರೆಹಮಾನ್ ಅವರಲ್ಲಿ ತರಬೇತಿ ಪಡೆದಿದ್ದರು.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಮೂಡುಬಿದಿರೆಯ ಎಂ.ಕೆ .ಅನಂತ್ರಾಜ್ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್- ಗೈಡ್ಸ್ ಕನ್ನಡ ಭವನದಲ್ಲಿ ಇತ್ತೀಚೆಗೆ ಶೋರಿನ್ ರಿಯು ಕರಾಟೆ ಅಸೋಸಿಯೇಶನ್ ಮತ್ತು ಸ್ವಾಮಿಸ್ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಮಹಮ್ಮದ್ ರೆಯ್ಯಾನ್ ಪ್ರಶಸ್ತಿ ಗಳಿಸಿದ್ದಾರೆ.ಅವರು ಕರಾಟೆ ಫೈಟಿಂಗ್ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು 2 ಚಿನ್ನದ ಪದಕ ಸಹಿತ ಎರಡನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಈ ಹಿಂದೆ ಹಾಸನದಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಅವರು ಸೆನ್ಸಾಯಿ ಅಬ್ದುಲ್ ರೆಹಮಾನ್ ಅವರಲ್ಲಿ ತರಬೇತು ಪಡೆದಿದ್ದರು. ಅವರು ಉಜಿರೆ ಗಾಂಧಿನಗರ ನಿವಾಸಿ, ಉದ್ಯಮಿ ಬಿ ಎಚ್ ಇಬ್ರಾಹಿಂ-ನೂರ್ ಜಹಾನ್ ದಂಪತಿ ಪುತ್ರ.
ಶೋರಿನ್ ರಿಯು ಕರಾಟೆ ಅಸೋಸಿಯೇಶನ್ ನ ಚೀಫ್ ಇನ್‌ಸ್ಟ್ರಕ್ಟರ್ ರೆನ್ಶಿ ನದೀಮ್, ಸಂಘಟನಾ ಅಧ್ಯಕ್ಷ ರೆನ್ಶಿ ರಾಜೇಶ್, ಕಾರ್ಯದರ್ಶಿ ಸ್ವಾಮಿಪ್ರಸಾದ್ ಮತ್ತು ದೈಹಿಕ ಶಿಕ್ಷಣ ಕಾಲೇಜು ಪ್ರಾಚಾರ್ಯ ಧನಂಜಯ ಶೆಟ್ಟಿ ಉಪಸ್ಥಿತರಿದ್ದು ಪ್ರಶಸ್ತಿ ಪತ್ರ ವಿತರಿಸಿ ,ಗೌರವಿಸಿದರು.