ಕರಾಟೆ: ಉಜಿರೆಯ ಮಹಮ್ಮದ್‌ ರಯ್ಯಾನ್‌ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

| Published : Jan 09 2024, 02:00 AM IST

ಸಾರಾಂಶ

ಮಹಮ್ಮದ್ ರಯ್ಯಾನ್, ಉಜಿರೆಯ ಗಾಂಧಿನಗರ ನಿವಾಸಿ ಬಿ.ಎಚ್. ಇಬ್ರಾಹಿಂ ಮತ್ತು ನೂರ್ ಜಹಾನ್ ದಂಪತಿ ಪುತ್ರ. ಅವರು ಸೆನ್ಸಾಯ್ ಸಿಹಾನ್ ಅಬ್ದುಲ್ ರಹಮಾನ್ ಅವರಿಂದ ತರಬೇತಿ ಪಡೆದಿದ್ದರು. ಅವರು ಶೋರಿನ್ ರಿಯೋ ಕರಾಟೆ ಅಸೋಸಿಯೇಷನ್ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ನಡೆದ ರಾಜ್ಯಮಟ್ಟದ 20ನೇ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಹಾಸನದ ಹಾಸನಾಂಬಾ ಇನ್ ಡೋರ್ ಸ್ಟೇಡಿಯಂನಲ್ಲಿ ನಡೆದ ಹಾಸನ್ ಓಪನ್ 3ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವೈಯಕ್ತಿಕ ಫೈಟಿಂಗ್ ಮತ್ತು ಕಟಾ ವಿಭಾಗದಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 5ನೇ ತರಗತಿಯ ಮಹಮ್ಮದ್ ರಯ್ಯಾನ್ ಪ್ರಥಮ ಸ್ಥಾನ ಮತ್ತು 2 ಚಿನ್ನದ ಪದಕ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಹಮ್ಮದ್ ರಯ್ಯಾನ್, ಉಜಿರೆಯ ಗಾಂಧಿನಗರ ನಿವಾಸಿ ಬಿ.ಎಚ್. ಇಬ್ರಾಹಿಂ ಮತ್ತು ನೂರ್ ಜಹಾನ್ ದಂಪತಿ ಪುತ್ರ. ಅವರು ಸೆನ್ಸಾಯ್ ಸಿಹಾನ್ ಅಬ್ದುಲ್ ರಹಮಾನ್ ಅವರಿಂದ ತರಬೇತಿ ಪಡೆದಿದ್ದರು. ಅವರು ಶೋರಿನ್ ರಿಯೋ ಕರಾಟೆ ಅಸೋಸಿಯೇಷನ್ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ನಡೆದ ರಾಜ್ಯಮಟ್ಟದ 20ನೇ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು.

ಹಾಸನದ ಶಾಸಕ ಸ್ವರೂಪ ಪ್ರಕಾಶ್, ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಕ್ಯೋಶಿ ಎಂ. ಅಲ್ತಾಫ್ ಪಾಷಾ, ಕರಾಟೆ ಅಸೋಸಿಯೇಷನ್ ಜನರಲ್ ಸೆಕ್ರೆಟರಿ, ಪಂದ್ಯಾವಳಿ ನಿರ್ದೇಶಕ ರೆನ್ಷಿ ಶಿವಮೊಗ್ಗ, ವಿನೋದ್ ಮತ್ತು ಹಾಸನ ಜಿಲ್ಲಾ ಕರಾಟೆ ಅಸೋಸಿಯೇಷನ್ ಅಧ್ಯಕ್ಷ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೆನ್ಸಾಯಿ ಮಹಮ್ಮದ್ ಆರಿಫ್ ಪ್ರಶಸ್ತಿ ಪತ್ರ ಮತ್ತು ಚಿನ್ನದ ಪದಕ ತೊಡಿಸಿ ಅಭಿನಂದಿಸಿ ಗೌರವಿಸಿದರು.