ಹೋರಾಟಗಾರರ ಬಿಡುಗಡೆಗೆ ಕರವೇ ಒತ್ತಾಯ

| Published : Jan 07 2024, 01:30 AM IST

ಸಾರಾಂಶ

ಕನಕಪುರ: ಕನ್ನಡಪರ ಹೋರಾಟಗಾರನ್ನು ಬಿಡುಗಡೆಗೊಳಿಸುವಂತೆ ಹಾಗೂ ರಾಜ್ಯದಲ್ಲಿ ನಾಮಫಲಕಗಳನ್ನು ಕನ್ನಡದಲ್ಲಿ ಅಳವಡಿಸುವಂತೆ ಅಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ಚನ್ನಬಸಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕನಕಪುರ: ಕನ್ನಡಪರ ಹೋರಾಟಗಾರನ್ನು ಬಿಡುಗಡೆಗೊಳಿಸುವಂತೆ ಹಾಗೂ ರಾಜ್ಯದಲ್ಲಿ ನಾಮಫಲಕಗಳನ್ನು ಕನ್ನಡದಲ್ಲಿ ಅಳವಡಿಸುವಂತೆ ಅಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ಚನ್ನಬಸಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಾಮನಗರ ಕರವೇ ಜಿಲ್ಲಾಧ್ಯಕ್ಷ ಕಬ್ಬಾಳೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ನಾಮಫಲಕ ರ್‍ಯಾಲಿ ಮೂಲಕ ಜಾಗೃತಿ ಅಭಿಯಾನ ಕೈಗೊಂಡು ಶಾಂತಿಯುತವಾಗಿ ನಡೆಸುತ್ತಿದ್ದ ರ್‍ಯಾಲಿಗೆಪೊಲೀಸರ ಅನುಮತಿ ನೀಡದೇ ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಅನ್ಯ ಭಾಷೆ ನಾಮಫಲಕಗಳು ಅದರಲ್ಲೂ ಇಂಗ್ಲಿಷ್ ನಾಮಫಲಕಗಳು ವಿಜೃಂಭಿಸುತ್ತಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತು ಕಾನೂನು ಅನುಷ್ಟಾನಕ್ಕೆ ತರುವಲ್ಲಿ ವಿಫಲವಾಗಿದ್ದಾರೆ. ಈ ಕೂಡಲೇ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕರವೇ ಕಾರ್ಯಕರ್ತರನ್ನು ಬಿಡುಗಡೆ ಗೊಳಿಸಬೇಕು. ಕರವೇ ಹೋರಾಟಗಾರರ ಮೇಲಿನ ಮೊಕದ್ದಮೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.

ಇದೇ ವೇಳೆ ಮುಖ್ಯಮಂತ್ರಿಗಳಿಗೆ ರಕ್ತದಲ್ಲಿ ಪತ್ರ ಬರೆದು ಅಂಚೆ ಕಚೇರಿಯ ಮೂಲಕ ಪತ್ರ ರವಾನಿಸಿ ಕರವೇ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕನಕಪುರ ಕರವೇ ತಾಲ್ಲೂಕು ಅಧ್ಯಕ್ಷ ಜಯ ರಾಮೇಗೌಡ, ನೇಗಿಲಯೋಗಿ ಟ್ರಸ್ಟ ಅಧ್ಯಕ್ಷ ಜಿ.ಪಿ ಕಾಡೇಗೌಡ, ಕರವೇ ಉಪಾಧ್ಯಕ್ಷ ಅಂದಾನಿಗೌಡ, ಮಾರೇಗೌಡ, ಮುಖಂಡರಾದ ಮಹೇಶ್, ಸುನೀಲ್, ಡಿ ರವಿ, ವೆಂಕಟೇಶ್, ತುಂಗಣಿ ಹರೀಶ್, ಪರಮೇಶ್, ಜಯರಾಂ, ಶೇಖರ್, ಮಂಜು ಶ್ರೀನಿವಾಸ್, ಮೋಹನ್ ಇತರರಿದ್ದರು. ಪೊಟೋ೬ಸಿಪಿಟಿ೭: ಕನಕಪುರದ ಚನ್ನಬಸಪ್ಪ ವೃತ್ತದಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಿಡುಗಡೆಗೊಳಿಸುವಂತೆ ಪ್ರತಿಭಟನೆ ನಡೆಸಲಾಯಿತು.