ನಗರದ ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಸಾರ್ವಜನಿಕರ ಸೇವೆಗೆ ಉದ್ಘಾಟಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಗುರುವಾರ ಆಸ್ಪತ್ರೆಯ ಮುಂಭಾಗ ಏಳು ದಿನಗಳ ಅಹೋರಾತ್ರಿ ಧರಣಿ ಆರಂಭಿಸಲಾಯಿತು. ಜಾಗಟೆ ಹಾಗೂ ಗಂಟೆ ಬಾರಿಸಿ ಸರ್ಕಾರ ಹಾಗೂ ಜಿಲ್ಲಾಡಳಿತವನ್ನು ಎಚ್ಚರಗೊಳಿಸುವ ಪ್ರಯತ್ನ ಮಾಡಲಾಯಿತು.
ಉಡುಪಿ: ನಗರದ ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಸಾರ್ವಜನಿಕರ ಸೇವೆಗೆ ಉದ್ಘಾಟಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಗುರುವಾರ ಆಸ್ಪತ್ರೆಯ ಮುಂಭಾಗ ಏಳು ದಿನಗಳ ಅಹೋರಾತ್ರಿ ಧರಣಿ ಆರಂಭಿಸಲಾಯಿತು. ಜಾಗಟೆ ಹಾಗೂ ಗಂಟೆ ಬಾರಿಸಿ ಸರ್ಕಾರ ಹಾಗೂ ಜಿಲ್ಲಾಡಳಿತವನ್ನು ಎಚ್ಚರಗೊಳಿಸುವ ಪ್ರಯತ್ನ ಮಾಡಲಾಯಿತು. 150 ಕೋಟಿ ರು. ವೆಚ್ಚದಲ್ಲಿ ನೂತನ ಜಿಲ್ಲಾಸ್ಪತ್ರೆ ನಿರ್ಮಾಣಗೊಂಡು ವರ್ಷ ಕಳೆದರೂ ಇನ್ನೂ ಸಾರ್ವಜನಿಕರ ಸೇವೆಗೆ ಲಭ್ಯವಾಗಿಲ್ಲ. ಆಸ್ಪತ್ರೆಯಲ್ಲಿ ಅಗತ್ಯ ಯಂತ್ರೋಪಕರಣ, ವೈದ್ಯರು, ದಾದಿಯರು ಹಾಗೂ ಇತರ ಸಿಬ್ಬಂದಿಗಳ ನಿಯೋಜನೆಯಾಗಿಲ್ಲ, ಸರ್ಕಾರ ಮತತ್ತು ಜನಪ್ರತಿನಿಧಿಗಳಿಗೆ ಈ ಬಗ್ಗೆ ಕಾಳಜಿ ಇಲ್ಲಿ ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಕರವೇ ಗೌರವಾಧ್ಯಕ್ಷ ಅನ್ಸರ್ ಅಹಮದ್ ಆಕ್ರೋಶ ವ್ಯಕ್ತಪಡಿಸಿದರು.
ಕರವೇ ರಾಜ್ಯ ಸಂಚಾಲಕ ಪ್ರಸನ್ನ ಶೆಟ್ಟಿ, ಜಾಗಟೆ ಹಾಗೂ ಗಂಟೆ ಬಾರಿಸುವ ಮೂಲಕ ನಿದ್ದೆಯಲ್ಲಿರುವ ಸರ್ಕಾರವನ್ನು ಬಡಿದೆಬ್ಬಿಸುವ ಕಾರ್ಯ ಮಾಡುತ್ತಿದ್ದೇವೆ. ಮೊದಲ ಮೂರು ದಿನಗಳ ಧರಣಿ ಸಾಂಕೇತಿಕವಾಗಿದ್ದು, ಬಳಿಕ ಸಂಘಟನೆಯ ಪದಾಧಿಕಾರಿಗಳು ಉಪವಾಸ ಸತ್ಯಾಗ್ರಹ ನಡೆಸಿ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಲಿದ್ದೇವೆ. ಏಳು ದಿನಗಳೊಳಗೆ ಜಿಲ್ಲಾಡಳಿತ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.