ಸಾರಾಂಶ
ರಾಜ್ಯದಲ್ಲಿ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲು ನೀಡುವ ಮಸೂದೆ ಜಾರಿ ಪ್ರಕ್ರಿಯೆ ಮುಂದೂಡಿರುವ ಸರ್ಕಾರದ ನಿರ್ಧಾರ ಮತ್ತು ಮೀಸಲಾತಿಗೆ ಅಪಸ್ವರ ಎತ್ತಿರುವ ಕಂಪನಿಗಳ ಧೋರಣೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದಿಂದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜ್ಯದಲ್ಲಿ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲು ನೀಡುವ ಮಸೂದೆ ಜಾರಿ ಪ್ರಕ್ರಿಯೆ ಮುಂದೂಡಿರುವ ಸರ್ಕಾರದ ನಿರ್ಧಾರ ಮತ್ತು ಮೀಸಲಾತಿಗೆ ಅಪಸ್ವರ ಎತ್ತಿರುವ ಕಂಪನಿಗಳ ಧೋರಣೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದಿಂದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.ಕನ್ನಡಿಗರಿಗೆ ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಮೀಸಲಾತಿ ನೀಡಲು ಮುಂದಾಗಿದ್ದ ಸರ್ಕಾರ ಬಳಿಕ ಉದ್ಯಮಿಗಳ ವಿರೋಧಕ್ಕೆ ಮಣಿದು ವಿಳಂಬ ನೀತಿ ಅನುಸರಿಸುತ್ತಿದೆ. ಮತ್ತೊಂದೆಡೆ, ಖಾಸಗಿ ಕಂಪನಿಗಳೂ ಸಹ ಕರ್ನಾಟಕದಲ್ಲಿ ಸೌಲಭ್ಯಗಳನ್ನು ಪಡೆದು ಮೀಸಲಾತಿಗೆ ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರವೀಣ್ ಶೆಟ್ಟಿ ಮಾತನಾಡಿ, ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು ಉದ್ಯಮಿಗಳು ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಕಂಪನಿ ಸ್ಥಾಪಿಸಲು ಕನ್ನಡಿಗರ ಜಾಗ ಬೇಕು. ಇಲ್ಲಿನ ರಸ್ತೆ, ಮೇಲ್ಸೇತುವೆಗಳು ಬಳಸಲು ಬೇಕು. ಆದರೆ ಕನ್ನಡಿಗರಿಗೆ ಉದ್ಯೋಗ ನೀಡಲು ಮಾತ್ರ ಮುಂದಾಗುತ್ತಿಲ್ಲ ಎಂದು ತರಾಟೆ ತೆಗೆದುಕೊಂಡರು.===
ಉದ್ಯಮಿಗಳು ಮಾತ್ರ ಸರ್ಕಾರಕ್ಕೆ ತೆರಿಗೆ ಪಾವತಿಸುವುದಿಲ್ಲ. ಪ್ರತಿಯೊಬ್ಬರೂ ತೆರಿಗೆ ಪಾವತಿಸುತ್ತಾರೆ. ಸರ್ಕಾರ ಯಾವುದೇ ಕಾರಣಕ್ಕೂ ಉದ್ಯಮಿಗಳಿಗೆ ಮಣಿಯಬಾರದು. ಸರ್ಕಾರ ಮೀಸಲು ಜಾರಿಗೆ ತರಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರವೀಣ್ ಶೆಟ್ಟಿ ಸೇರಿದಂತೆ ವೇದಿಕೆ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆಡೆಗೊಳಿಸಿದರು.ಕ್ಯಾಪ್ಷನ್....
ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಸೂದೆ ಜಾರಿ ವಿಳಂಬ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದಿಂದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.