ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಕರವೇ ಪ್ರತಿಭಟನೆ

| Published : Mar 06 2024, 02:20 AM IST / Updated: Mar 06 2024, 03:01 PM IST

ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಅಂಗಡಿ, ಮುಂಗಟ್ಟುಗಳ ಹೆಸರು ಕನ್ನಡದಲ್ಲಿರಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಶಿವಮೊಗ್ಗ: ಅಂಗಡಿ, ಮುಂಗಟ್ಟುಗಳ ಹೆಸರು ಕನ್ನಡದಲ್ಲಿರಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಶಿವಪ್ಪ ನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಡಿ.27ರಂದು ಕನ್ನಡ ನಾಮಫಲಕ ಕಡ್ಡಾಯ ಹೋರಾಟದಲ್ಲಿ ನೂರಾರು ಕನ್ನಡ ಕಾರ್ಯಕರ್ತರು ಜೈಲು ಸೇರಿದ್ದರು. ಈ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಕಾನುನಾಗಿ ಜಾರಿಯಾಗಿದೆ. ಈ ಕಾನೂನು ಪರಿಪೂರ್ಣವಾಗಿ ಜಾರಿ ಆಗುವಂತೆ ನೋಡಿಕೊಳ್ಳುವ ಜವಾಬ್ದಾರಿ ಕನ್ನಡಿಗರ ಮೇಲಿದೆ. ಕರ್ನಾಟಕದಲ್ಲಿ ಇದ್ದುಕೊಂಡು ಬೇರೆ ಭಾಷೆಯ ಬೋರ್ಡ್‌ಗಳನ್ನು ಹಾಕುವುದು ಸರಿಯಲ್ಲ. ಎಲ್ಲ ನಾಮಫಲಕದಲ್ಲೂ ಶೇ.60ರಷ್ಟು ಕನ್ನಡ ಭಾಷೆ ಬಳಕೆ ಆಗಬೇಕು ಎಂದು ಒತ್ತಾಯಿಸಿದರು.

ಬೇರೆ ಭಾಷೆಗಳ ನಾಮಫಲಕಗಳು ಕನ್ನಡಕ್ಕೆ ಅಗೌರವವಾಗಿವೆ. ಕರ್ನಾಟಕದಲ್ಲಿ ಕನ್ನಡದಲ್ಲೇ ನಾಮಫಲಕ ಇರಬೇಕು ಎಂಬ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ವಿಸ್ತರಿಸುತ್ತಿದ್ದು, ಎಲ್ಲರಿಗೂ ಅರಿವು ಮೂಡಿಸುವ ಕೆಲಸ ಮಾಡಲಿದೆ. ಆದ್ದರಿಂದ ಎಲ್ಲ ಉದ್ಯಮಿಗಳು, ವ್ಯಾಪಾರಸ್ಥರು, ಶಿಕ್ಷಣ ಸಂಸ್ಥೆಗಳು, ಖಾಸಗಿ ಆಸ್ಪತ್ರೆಗಳು, ಕೈಗಾರಿಕೆಗಳು, ತಮ್ಮ ಸಂಸ್ಥೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡವಿರಬೇಕು. ಕನ್ನಡಿಗರ ನಾಡಿನಲ್ಲಿ ಕನ್ನಡಕ್ಕೆ ಮೊದಲ ಸ್ಥಾನ ಕೊಡಬೇಕು. ಇದನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಂಜುನಾಥ್, ಧನಂಜಯ್, ಜ್ಯೋತಿ, ಗೀತಾ ಕೆ.ಸಿ. ಮತ್ತಿತರರಿದ್ದರು.

ಅಂಗಡಿ, ಮುಂಗಟ್ಟುಗಳ ಹೆಸರು ಕನ್ನಡದಲ್ಲಿರಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.