ಸಿಎಂ ವಿರುದ್ಧ ಕರವೇ ಮಹಿಳಾ ಅಧ್ಯಕ್ಷೆ ಪ್ರತಿಭಟನೆ

| Published : Apr 29 2024, 01:31 AM IST

ಸಿಎಂ ವಿರುದ್ಧ ಕರವೇ ಮಹಿಳಾ ಅಧ್ಯಕ್ಷೆ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಬಾಗಲಕೋಟೆ ಜಿಲ್ಲೆ ಬನಹಟ್ಟಿಯಲ್ಲಿ ಶನಿವಾರ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದರು

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ

ಬಾಗಲಕೋಟೆ ಜಿಲ್ಲೆ ಬನಹಟ್ಟಿಯಲ್ಲಿ ಶನಿವಾರ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದರು.

ಬಾಗಲಕೋಟೆ ಮೆಡಿಕಲ್ ಕಾಲೇಜಿಗೆ ಅನುದಾನ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕರವೇ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ಹಿರೇಮಠ ಪ್ರತಿಭಟಿಸಿ ಸಿಎಂ ವಿರುದ್ಧ ಘೋಷಣೆ ಕೂಗಿದರು. ಇದರಿಂದ ಸಿಎಂಗೆ ಮುಜುಗರ ತಂದ ಪ್ರಸಂಗ ನಡೆಯಿತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಾಜೇಶ್ವರಿ ಅವರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.--------------