ಸಾರಾಂಶ
ಬಳ್ಳಾರಿ: ದೇಶಕ್ಕಾಗಿ ಪ್ರತಿಯೊಬ್ಬರು ಸಮರ್ಪಣಾ ಭಾವ ಹೊಂದಿರಬೇಕು. ಮಕ್ಕಳಲ್ಲಿ ದೇಶಪ್ರೇಮ ಮೂಡಿಸಿ ಸದೃಢ ಭಾರತ ಕಟ್ಟುವ ಕೆಲಸದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಮಾಜಿ ಸೈನಿಕ ರುದ್ರಮುನಯ್ಯ ಸ್ವಾಮಿ ಹೇಳಿದರು.ಇಲ್ಲಿನ ಶ್ರೀ ವಾಸವಿ ವಿದ್ಯಾಲಯದಲ್ಲಿ ಶುಕ್ರವಾರ ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯ ದಿವಸದ ಸಂಭ್ರಮಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದೇಶ ಮೊದಲು. ಕುಟುಂಬ ಆಮೇಲೆ ಎಂಬ ತ್ಯಾಗಮನೋಭಾವ ಇರಬೇಕು. ದೇಶಕ್ಕಾಗಿ ಯಾವುದೇ ತ್ಯಾಗ ಮಾಡಲು ಸನ್ನದ್ಧರಾಗಬೇಕು. ದೇಶದ ಭವಿಷ್ಯವಾದ ಮಕ್ಕಳಲ್ಲಿ ರಾಷ್ಟ್ರಪ್ರೇಮ, ಐಕ್ಯತೆ, ಸಮಗ್ರತೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.ಶ್ರೀ ವಾಸವಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶ್ರೀವಾಸವಿ ಎಜ್ಯುಕೇಷನ್ ಟ್ರಸ್ಟ್‌ನ ಅಧ್ಯಕ್ಷ ಪೋಲಾ ಬಸವರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್‌ನ ಕಾರ್ಯದರ್ಶಿ ಪಿ.ಎನ್.ಸುರೇಶ್ ಪ್ರಾಸ್ತಾವಿಕ ಮಾತನಾಡಿದರು.
ಮಾಜಿ ಯೋಧ ಶಿವಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಟ್ರಸ್ಟ್‌ನ ಜಂಟಿ ಕಾರ್ಯದರ್ಶಿ ಬಿಂಗಿ ಸುರೇಶ್, ಶಾಲೆಯ ಮುಖ್ಯಗುರು ವೀರೇಶ್, ಬೋಧಕ – ಬೋಧಕೇತರ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಶಾಲೆಯ 8ನೇ ತರಗತಿ ವಿದ್ಯಾರ್ಥಿ ಇಂದ್ರಜಾ ಕರ‍್ಗಿಲ್ ಅವರು ಯುದ್ಧದ ಇತಿಹಾಸ ಮತ್ತು ಅದರಲ್ಲಿ ನಮ್ಮ ಯೋಧರ ಮಹಾನ್ ಸೇವೆಯನ್ನು ಭಾಷಣದಲ್ಲಿ ವಿವರಿಸಿದರು.
ಬಸವರಾಜೇಶ್ವರಿ, ಎಚ್.ಎಂ.ಸುಜಾತಾ, ಹರಿಣಿ ಹಾಗೂ ಬಿಲ್ವಶ್ರೀ ಕಾರ್ಯಕ್ರಮ ನಿರ್ವಹಿಸಿದರು.ಬಳ್ಳಾರಿಯ ಶ್ರೀವಾಸವಿ ವಿದ್ಯಾಶಾಲೆಯಲ್ಲಿ ಜರುಗಿದ ಕಾರ್ಗಿಲ್ ವಿಜಯದಿವಸ ಸಂಭ್ರಮಾಚರಣೆಯಲ್ಲಿ ಮಾಜಿ ಯೋಧರನ್ನು ಸನ್ಮಾನಿಸಲಾಯಿತು.