ಸಾರಾಂಶ
ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಬೃಹತ್ ‘ಪಂಜಿನ ಮೆರವಣಿಗೆ’ ಹಾಗೂ ಸಭಾ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಕಾಪು
ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ 25ನೇ ವರ್ಷದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಶನಿವಾರ ಬೃಹತ್ ‘ಪಂಜಿನ ಮೆರವಣಿಗೆ’ ಹಾಗೂ ಸಭಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಸಕ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಈ ಸಂದರ್ಭ ದೇಶಕ್ಕೆ ಸೇವೆ ಸಲ್ಲಿಸಿ ನಿವೃತ್ತ ಸೈನಿಕರಾದ ವಿನೋದ್ ಕೋಟ್ಯಾನ್ ಮೂಳೂರು ಮತ್ತು ರಾಜೇಶ್ ಪಾಟ್ಕರ್ ಪಂಜಿಮಾರ್ ಅವರನ್ನು ಯುವ ಮೋರ್ಚಾ ವತಿಯಿಂದ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಲಾಯಿತು.ಈ ಸಂದರ್ಭ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸೋನು ಪಾಂಗಾಳ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕೇಂದ್ರಿಯ ವಿಶ್ವಸ್ಥ ಮಂಡಳಿಯ ಸದಸ್ಯ ಪ್ರೇಮಾನಂದ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.